ETV Bharat / state

ನಿವೃತ್ತ ಐಪಿಎಸ್ ಅಧಿಕಾರಿ ನಾರಾಯಣ ಗೌಡ ವಿಧಿವಶ

ಅನಾರೋಗ್ಯದಿಂದ ಬಳಲುತ್ತಿದ್ದ ನಿವೃತ್ತ ಐಪಿಎಸ್ ಅಧಿಕಾರಿ ನಾರಾಯಣ ಗೌಡ ವಿಧಿವಶರಾಗಿದ್ದಾರೆ. ಸಿಸಿಬಿ ಜಂಟಿ ಆಯುಕ್ತರಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್​​ಪಿಯಾಗಿ ನಾರಾಯಣ ಗೌಡ ಕರ್ತವ್ಯ ನಿರ್ವಹಿಸಿದ್ದರು..

Retired IPS Officer M. Narayana Gowda
ನಿವೃತ್ತ ಐಪಿಎಸ್ ಅಧಿಕಾರಿ ನಾರಾಯಣ ಗೌಡ
author img

By

Published : Jan 30, 2022, 11:45 AM IST

ಬೆಂಗಳೂರು : ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ಪ್ರಸ್ತುತ ಕೇಂದ್ರ ವಿಭಾಗದ ಡಿಸಿಪಿಯಾಗಿರುವ ಎಂ.ಎನ್ ಅನುಚೇತ್ ಅವರ ತಂದೆ ಎಂ.ನಾರಾಯಣ ಗೌಡ ನಿಧನರಾಗಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

Retired IPS Officer M. Narayana Gowda
ನಿವೃತ್ತ ಐಪಿಎಸ್ ಅಧಿಕಾರಿ ನಾರಾಯಣ ಗೌಡ

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ನಾರಾಯಣ ಗೌಡ ಅವರು ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ತಡ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಿಸಿಬಿ ಜಂಟಿ ಆಯುಕ್ತರಾಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸ್​​ಪಿಯಾಗಿ ನಾರಾಯಣ ಗೌಡ ಕರ್ತವ್ಯ ನಿರ್ವಹಿಸಿದ್ದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ : ಬೆಂಗಳೂರಿನ ಸದಾಶಿವನಗರದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ ಹುಟ್ಟೂರಾದ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಾಸ್ತೆನಹಳ್ಳಿಯಲ್ಲಿ ಮೃತರ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕಂಟೈನರ್, ಕಾರು ನಡುವೆ ಭೀಕರ ಅಪಘಾತ, ಐವರ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.