ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹೊತ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಂದಾಯ ಸಚಿವ ಆರ್.ಅಶೋಕ್ ಭೇಟಿ ನೀಡಿ ಶೀಘ್ರವಾಗಿ ಆರೋಪಿಗಳ ಬಂಧನವಾಗಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರ ಕಾರುಗಳಿಗೆ ಬೆಂಕಿ ಇಟ್ಟು ದುಷ್ಕರ್ಮಿಗಳು ಯಾರೆಂದು ಗೊತ್ತಾಗಿದೆ. ರಾತ್ರಿ 10 ಗಂಟೆಯೊಳಗೆ ಬಂಧಿಸಲು ಸೂಚಿಸಿರುವುದಾಗಿ ಆದೇಶ ನೀಡಲಾಗಿದೆ. ಹೀಗೆ ಅಖಂಡ ಶ್ರೀನಿವಾಸ್ ಮೂರ್ತಿ ಮನೆ ಮೇಲೂ ದಾಳಿ ನಡೆದಿತ್ತು. ಸತೀಶ್ ರೆಡ್ಡಿ ಹುಟ್ಟಿ ಬೆಳೆದ ಜಾಗದಲ್ಲಿ ಈ ರೀತಿ ಮಾಡಿರುವುದು ಖಂಡನೀಯ, ನಾಲ್ಕು ತಂಡದಿಂದ ಹುಡುಕಾಟ ನಡೆದಿದೆ. ಆರೋಪಿ ಒಬ್ಬನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಇದೆ ಎಂದರು.
ಓದಿ: ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ
ಬೆಂಗಳೂರಿನಲ್ಲಿ ಇಂತಹ ಘಟನೆ ನಡೆದರೆ ಸುಮ್ಮನಿರಲು ಸಾಧ್ಯವಿಲ್ಲ. ಗಾಂಜಾ ಹೊಡೆದು ರಸ್ತೆಯಲ್ಲಿ ಓಡಾಡುವವರಿಗೆ ಬುದ್ಧಿ ಕಲಿಸುತ್ತೇವೆ. ಮೂರು ಜನ ನೇರವಾಗಿ ಭಾಗಿಯಾಗಿದ್ದಾರೆ. ಪೆಟ್ರೋಲ್ ಬಂಕ್ನಿಂದ ಪೆಟ್ರೋಲ್ ತಂದಿರುವವರೇ ಈ ಕೃತ್ಯ ಮಾಡಿದ್ದಾರೆ. ಅವರು ಪಾತಾಳದಲ್ಲಿದ್ದರೂ ಬಿಡುವ ಪ್ರಶ್ನೆ ಇಲ್ಲ ಎಂದು ಗುಡುಗಿದರು.
ಇದನ್ನೂ ಓದಿ: ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ಕಿರಾತಕರು - CCTVಯಲ್ಲಿ ದುಷ್ಕೃತ್ಯ ಸೆರೆ