ಬೆಂಗಳೂರು: ಸರ್ಕಾರಿ ನೌಕರರ ಪ್ರಭಾರ ಭತ್ಯೆಯನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಪ್ರಭಾರ ಭತ್ಯೆಯನ್ನು ಮೂಲ ವೇತನದ ಶೇ. 15ರ ದರದಲ್ಲಿ ನಿಗದಿಗೊಳಿಸಿ ಆದೇಶಿಸಲಾಗಿದೆ. ಪ್ರಭಾರ ಭತ್ಯೆಯ ಪರಿಷ್ಕೃತ ದರ ಸೆ.1ರಿಂದ ಜಾರಿಗೆ ಬರಲಿದೆ.
ಸರ್ಕಾರಿ ನೌಕರರನ್ನು ಸ್ವತಂತ್ರ ಪ್ರಭಾರದಲ್ಲಾಗಲಿ ಅಥವಾ ತಮ್ಮ ಹುದ್ದೆಯ ಕರ್ತವ್ಯದ ಜೊತೆ ಬೇರೊಂದು ಹುದ್ದೆಯ ಹೆಚ್ಚಿನ ಪ್ರಭಾರದಲ್ಲಿರಿಸಿದಾಗ ಆ ಹುದ್ದೆಯ ವೇತನ ಶ್ರೇಣಿಯ ಕನಿಷ್ಠ ಹಂತದಲ್ಲಿ ಮೂರು ತಿಂಗಳವರೆಗೆ ಶೇಕಡ 7.5ರ ದರದಲ್ಲಿ, ಆ ನಂತರದ ಮೂರು ತಿಂಗಳಲ್ಲಿ ಹೆಚ್ಚಿನ ಅವಧಿಗೆ ಶೇಕಡ 15ರ ದರದಲ್ಲಿ ಪ್ರಭಾರ ಭತ್ಯೆಯನ್ನು ನಿಗದಿಪಡಿಸಿ ಆದೇಶಿಸಲಾಗಿತ್ತು.
ಪ್ರಸ್ತುತ ಸರ್ಕಾರದ ಇಲಾಖೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಸುಗಮ ಆಡಳಿತಕ್ಕಾಗಿ ಹಲವಾರು ಸಿಬ್ಬಂದಿಯನ್ನು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಲ್ಲಿ ಅಧಿಕ ಪ್ರಭಾರದಲ್ಲಿರಿಸಲಾಗಿದೆ. ಸದ್ಯ ಪ್ರಭಾರ ಭತ್ಯೆ ಮಂಜೂರು ಮಾಡಲು ಅನುಸರಿಸುತ್ತಿರುವ ಕಾರ್ಯವಿಧಾನ ಜಟಿಲವಾಗಿದೆ. ಹಲವು ಸಂದರ್ಭಗಳಲ್ಲಿ ಪ್ರಚಾರ ಭತ್ಯೆ ಪಡೆಯುವುದು ಬಹಳ ಕಷ್ಟಕರವಾಗುತ್ತಿದೆ. ಈ ಕಾರ್ಯವಿಧಾನವನ್ನು ಸರಳಗೊಳಿಸುವ ನಿಟ್ಟಿನಲ್ಲಿ ಎರಡು ಹಂತದಲ್ಲಿ ನೀಡುತ್ತಿರುವ ಪ್ರಭಾರ ಭತ್ಯೆಯನ್ನು ವಿಲೀನಗೊಳಿಸಿ ಒಂದೇ ಹಂತದಲ್ಲಿ ನೀಡಲು ಕೋರಲಾಗಿತ್ತು.
ಇದನ್ನೂ ಓದಿ: ರಾಜ್ಯದ ಮತ್ತೆ ವಿದ್ಯುತ್ ದರ ಏರಿಕೆ ಶಾಕ್: ಅ.1 ರಿಂದ ಮತ್ತಷ್ಟು ದುಬಾರಿ