ETV Bharat / state

ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ನಿರಾಕರಿಸಿದ ಬರಗೂರು ರಾಮಚಂದ್ರಪ್ಪ - Baraguru Ramachandrappa

ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚನೆ ಮಾಡುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಆದರೆ ಸಮಿತಿಯ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳಲು ಸಾಹಿತಿ ನಿರಾಕರಿಸಿದ್ದಾರೆ.

cm-siddaramaiah-instructs-committee-for-revision-of-textbooks-headed-by-baraguru-ramachandrappa
ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನ ನಿರಾಕರಿಸಿದ ಬರಗೂರು ರಾಮಚಂದ್ರಪ್ಪ
author img

By

Published : Jun 7, 2023, 4:42 PM IST

ಬೆಂಗಳೂರು : ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ಗೊಂದಲ ಬಗೆಹರಿಸುವ ನಿಟ್ಟಿನಲ್ಲಿ ತಾತ್ಕಾಲಿಕ ಸಮಿತಿ ರಚನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಾಹಿತಿ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಸಮಿತಿ ರಚನೆ ಮಾಡುವಂತೆ ತಿಳಿಸಿದ್ದಾರೆ. ಈ ಮೂಲಕ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಲೋಪದೋಷಗಳನ್ನು ಸರಿಪಡಿಸುವಂತೆ ಸೂಚಿಸಿದ್ದಾರೆ. ಆದರೆ ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ಸ್ಥಾನವನ್ನು ಬರಗೂರು ರಾಮಚಂದ್ರಪ್ಪ ತಿರಸ್ಕರಿಸಿದ್ದಾರೆ.

ಕಳೆದ ಶೈಕ್ಷಣಿಕ ವರ್ಷದಲ್ಲಿ 1 ರಿಂದ 10 ನೇ ತರಗತಿವರೆಗಿನ ಪಠ್ಯ ಪರಿಷ್ಕರಣೆ ಮಾಡಲಾಗಿತ್ತು. ಇದರಲ್ಲಿ ಯಾವುದಾದರೂ ಪಾಠಗಳನ್ನು ಕೈಬಿಡಬೇಕಾ? ಪಾಠಗಳಲ್ಲಿನ ಕೆಲವು ಪದ ಬಳಕೆಗಳನ್ನು ಗುರುತಿಸಿ ಇನ್ನೊಂದು ವಾರದಲ್ಲಿ ಪಠ್ಯ ಪರಿಷ್ಕರಣೆ ಲೋಪದೋಷ ಸಂಬಂಧ ವರದಿ ಕೊಡುವಂತೆ ಸಿಎಂ ಹೇಳಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ ಹೊಸ ಪಾಠಗಳ ಸೇರ್ಪಡೆ ಮಾಡದಿರಲು ನಿರ್ಧರಿಸಲಾಗಿದೆ. ಕಳೆದ ವರ್ಷ ಸೇರಿಸಲಾಗಿದ್ದ ಆರ್​ಎಸ್​​​​ಎಸ್​​​ ಸಂಸ್ಥಾಪಕ ಕೇಶವ ಬಲರಾಮ ಹೆಡ್ಗೇವಾರ್ ಹಾಗೂ ಚಕ್ರವರ್ತಿ ಸೂಲಿಬೆಲೆ ಪಾಠಕ್ಕೆ ಕತ್ತರಿ ಬೀಳುವ ಸಾಧ್ಯತೆ ಹೆಚ್ಚಿದೆ.

ಪಠ್ಯ ಪರಿಷ್ಕರಣೆ ಸಮಿತಿ ವಿಚಾರವಾಗಿ ಖಾಸಗಿ ಸುದ್ದಿ ಮಾಧ್ಯಮವೊಂದಕ್ಕೆ ಮಾತನಾಡಿರುವ ಬರಗೂರು ರಾಮಚಂದ್ರಪ್ಪ, "ನಾನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷನಾಗಿಲ್ಲ. ಪಠ್ಯ ಪರಿಷ್ಕರಣೆಗೆ ಹೊಸ ಸಮಿತಿ ರಚನೆ ಆಗಿಲ್ಲ" ಎಂದರು.

ಸಿಎಂ ಸಿದ್ದರಾಮಯ್ಯ ಸರಣಿ ಸಭೆ: ಇನ್ನೊಂದೆಡೆ, ಸಿಎಂ ಸಿದ್ದರಾಮಯ್ಯ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸರಣಿ ಸಭೆಗಳನ್ನು ನಡೆಸಿದ್ದಾರೆ. ಮೊದಲು ಕಾಂಗ್ರೆಸ್ ಪಕ್ಷದ ಬಿಬಿಎಂಪಿ ಮಾಜಿ ಮಹಾಪೌರರು ಹಾಗೂ ಆಡಳಿತ ಪಕ್ಷದ ಮಾಜಿ ನಾಯಕರುಗಳ ನಿಯೋಗ ಮುಖ್ಯಮಂತ್ರಿಯನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ, ಬಿಬಿಎಂಪಿ ಚುನಾವಣೆ ಹಾಗೂ ಬಿಜೆಪಿ ಅವಧಿಯಲ್ಲಿ ನಡೆದಿರುವ ಅವೈಜ್ಞಾನಿಕ ವಾರ್ಡ್‌ಗಳ ವಿಂಗಡಣೆ ಕುರಿತಂತೆ ಸುದೀರ್ಘವಾಗಿ ಚರ್ಚೆ ನಡೆಸಿತು. ಯಾವುದೇ ಸಂದರ್ಭದಲ್ಲಿಯೂ ಬಿಬಿಎಂಪಿ ಚುನಾವಣೆ ಘೋಷಣೆ ಆಗಬಹುದು. ಅದಕ್ಕೆ ಪಕ್ಷ ಸಜ್ಜಾಗಬೇಕಿದೆ. ಈ ನಿಟ್ಟಿನಲ್ಲಿ ಗಮನ ಹರಿಸುವಂತೆ ನಿಯೋಗದ ಸದಸ್ಯರು ಸಿಎಂಗೆ ಮನವಿ ಮಾಡಿದರು.

ಇದಾದ ಬಳಿಕ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸದಸ್ಯರು, ಸುಮಾರು 80 ಕ್ಕೂ ಹೆಚ್ಚು ಹಿಂದುಳಿದ ಜಾತಿಗಳ ಪ್ರತಿನಿಧಿಗಳು ಹಾಗೂ 60ಕ್ಕೂ ಹೆಚ್ಚು ದಲಿತ ಜಾತಿ-ಸಮುದಾಯಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಅಭಿನಂದಿಸಿದರು. ಈ ವೇಳೆ ಹಲವು ಪ್ರಮುಖ ಸಂಗತಿಗಳ ಕುರಿತಂತೆ ಚರ್ಚೆ ನಡೆಸಿದರು.

ಬಡಗಲಾಪುರ ನಾಗೇಂದ್ರ, ಚಾಮರಸ ಮಾಲಿ ಪಾಟೀಲ್, ಜಿ.ಸಿ.ಬೈಯ್ಯಾರೆಡ್ಡಿ ನೇತೃತ್ವದ ರೈತ ಮುಖಂಡರ ನಿಯೋಗ ಸಿದ್ದರಾಮಯ್ಯರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುವುದೂ ಸೇರಿದಂತೆ ಹಲವು ಸಂಗತಿಗಳ ಕುರಿತು ಚರ್ಚಿಸಿದರು.

ಇದನ್ನೂ ಓದಿ : ನಾವೇನು ಕಾಂಗ್ರೆಸ್ ಜೊತೆ ಹೋಗೋಕೆ ಆಗುತ್ತಾ? ಈಗ ಕಾಂಗ್ರೆಸ್​ನವರು ಬಹಳ ಎತ್ತರಕ್ಕೆ ಬೆಳೆದಿದ್ದಾರೆ: ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.