ETV Bharat / state

ಇಂದಿನಿಂದ ಆ.21ರವರೆಗೆ ನಗರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಬಿಎಲ್​ಒ ತಂತ್ರಾಂಶದ ಮೂಲಕ ಪರಿಷ್ಕರಣೆ ಕಾರ್ಯ ಮಾಡಲಿದ್ದಾರೆ.

Corporation Chief Commissioner Tushar Girinath meeting
ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಭೆ
author img

By

Published : Jul 21, 2023, 1:09 PM IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ವೇಳೆ ಯಾವುದೇ ನ್ಯೂನತೆಗಳಾಗದಂತೆ ಸರಿಯಾದ ಮಾದರಿಯಲ್ಲಿ ಪರಿಷ್ಕರಣೆ ಕಾರ್ಯವಾಗಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಜೊತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಜೆದ ಸಭೆಯ ಕುರಿತು ಮಾತನಾಡಿದ ಅವರು, ಭಾರತ ಚುನಾವಣಾ ಆಯೋಗ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕಣೆಯ ವೇಳಾಪಟ್ಟಿಯನ್ನು ಹೊರಡಿಸಿದ್ದು, ಅದರಂತೆ ಮತದಾರರ ಪಟ್ಟಿ ಪರಿಷ್ಕಣೆಯು ಇಂದಿನಿಂದ ಆಗಸ್ಟ್ 21ರವರೆಗೆ ನಡೆಯಲಿದೆ. ಒಂದು ತಿಂಗಳ ಕಾಲ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಬಿಎಲ್ಒ ತಂತ್ರಾಂಶದ ಮೂಲಕ ಮತದಾರರ ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಕೆಲಸ ಮಾಡಲಿದ್ದಾರೆ. ಈ ವೇಳೆ ಬೂತ್ ಮಟ್ಟದ ಏಜೆಂಟ್​ಗಳು ಸ್ಥಳದಲ್ಲಿರಬೇಕಿದ್ದು, ಎಲ್ಲೆಡೆ ಬೂತ್ ಮಟ್ಟದ ಏಜೆಂಟ್​ಗಳನ್ನು ನಿಯೋಜನೆ ಮಾಡಬೇಕು ಎಂದು ತಿಳಿಸಿದರು.

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳು ಕಡಿಮೆ ಇದ್ದರೆ, ಕೂಡಲೇ ನಿಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮತದಾರರ ಪಟ್ಟಿಯಲ್ಲಿ ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಕೆಲಸವನ್ನು ಎಲ್ಲ ಬಿಎಲ್ಒಗಳು ಯಾವುದೇ ಲೋಪದೋಷಗಳಿಲ್ಲದಂತೆ ಸರಿಯಾಗಿ ನಿರ್ವಹಿಸಬೇಕು. ಮತದಾರರ ಪಟ್ಟಿಯಲ್ಲಿ ಮರಣ ಹೊಂದಿರುವ ಹಾಗೂ ಬೇರೆಡೆ ಸ್ಥಳಾಂತರಗೊಂಡಿರುವ ಮತದಾರರ ಮಾಹಿತಿಯನ್ನು ಸರಿಯಾಗಿ ನಮೂದಿಸಬೇಕು. ಮತದಾರರ ಪಟ್ಟಿ ಪರಿಷ್ಕರಣೆ -2024ರಲ್ಲಿ ಹೊಸದಾಗಿ ಹೆಸರು ನೊಂದಾಯಿಸಲು (ನಮೂನೆ 6), ತಿದ್ದುಪಡಿಗಾಗಿ (ನಮೂನೆ 8) ಅರ್ಜಿ ಸಲ್ಲಿಸಬೇಕಿದೆ. ಪ್ರಕ್ರಿಯೆ ಮುಗಿದ ನಂತರ ಆ.28ರಿಂದ ಸೆ.29ರವರೆಗೆ ಮತಗಟ್ಟೆಗಳ ಪುನರ್ ವಿಂಗಡಣಾ ಕಾರ್ಯ ನಡೆಯಲಿದ್ದು, ಮತಗಟ್ಟೆಗಳ ಸ್ಥಳಾಂತರ/ದುರಸ್ತಿಯಲ್ಲಿರುವ ಮತಗಟ್ಟೆಗಳ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಉಜ್ವಲ್ ಕುಮಾರ್ ಘೋಷ್, ಅ.ರ.ಪ ಜಿಲ್ಲಾ ಚುನಾವಣಾಧಿಕಾರಿಗಳು, ರಾಜಕೀಯ ಪಕ್ಷದ ಪ್ರತಿನಿಧಿಗಳು, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಅಜಯ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಇದ್ದರು.

ಇದನ್ನೂ ಓದಿ: ಬಿಡಿಎ ಬಿಬಿಎಂಪಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ, ಕಡತಗಳನ್ನು ಮನೆ ಬಾಗಿಲಿಗೆ ತಲುಪಿಸಲು ನಿರ್ಧಾರ: ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.