ಬೆಂಗಳೂರು: ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ನಾಮಪತ್ರ ಸಲ್ಲಿಕೆಗೂ ಮುನ್ನ ಮಹದೇವಪುರ ಕ್ಷೇತ್ರದ ಚೀಮಸಂದ್ರದ ಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಮತದಾರರು ಹಾಗೂ ಕಾರ್ಯಕರ್ತರೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಅವರು, ಈ ಬಾರಿ ನನ್ನನ್ನು ಆಶೀರ್ವಾದಿಸುವಂತೆ ಮನವಿ ಮಾಡಿದರು. ಕಳೆದ ಬಾರಿ ಮೋದಿ ನೇತೃತ್ವದ ಸರ್ಕಾರ ವೈಫಲ್ಯ ಅನುಭವಿಸಿದ್ದು, ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನೋಟ್ ಬ್ಯಾನ್ನಿಂದ ಬಡವರು ಹೆಚ್ಚು ತೊಂದರೆ ಅನುಭವಿಸುವಂತಾಗಿದ್ದು, ನೋಟ್ ಬ್ಯಾನ್ನಿಂದ ಯಾವುದೇ ಪ್ರಯೋಜನವಾಗದೇ ಬಡವರಿಗೆ ಮಾರಕವಾಗಿತ್ತು ಎಂದು ಸಚಿವ ಕೃಷ್ಣ ಬೈರೇಗೌಡ ಇದೇ ವೇಳೆ ಹರಿಹಾಯ್ದರು. ಶಾಸಕ ಬೈರತಿ ಸುರೇಶ್ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಭಾಗಿಯಾಗಿದ್ದರು.