ETV Bharat / state

ಸಿಲಿಕಾನ್​ ಸಿಟಿಯಲ್ಲಿ ಏರುತ್ತಿರುವ ಸೋಂಕಿತರ ಸಂಖ್ಯೆ: ತುರ್ತು ಸಭೆ ನಡೆಸುತ್ತಿರೋ ಸಿಎಂ

ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕೈ ಮೀರುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸಚಿವರು ಮತ್ತು ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸುತ್ತಿದ್ದಾರೆ.

author img

By

Published : Jun 22, 2020, 1:26 PM IST

Rising number of infected people in Silicon City: CM BSY Emergency Meeting
ಸಿಲಿಕಾನ್​ ಸಿಟಿಯಲ್ಲಿ ಏರುತ್ತಿರುವ ಸೋಂಕಿತರ ಸಂಖ್ಯೆ: ಸಿಎಂ ಬಿಎಸ್​ವೈ ತುರ್ತು ಸಭೆ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕೈ ಮೀರುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸಚಿವರು ಮತ್ತು ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸುತ್ತಿದ್ದಾರೆ.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ಡಿಜಿ ಐಜಿಪಿ ಪ್ರವೀಣ್ ಸೂದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ಆಗಮಿಸಿದ್ದಾರೆ.

ಸಭೆ ಆರಂಭಗೊಳ್ಳುತ್ತಿದ್ದಂತೆ ಲಾಕ್​​​​​ಡೌನ್ ಸಡಿಲಿಕೆ ನಂತರ ಕೊರೊನಾ ಸೊಂಕು ಹೆಚ್ಚಾಗುತ್ತಿದೆ. ಜನ ಸರಿಯಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳದೇ ಇವತ್ತಿನ ಈ ಪರಿಸ್ಥಿತಿಗೆ ಕಾರಣವಾಗಿದ್ದಾರೆ. ಹೊರರಾಜ್ಯದಿಂದ ಹೆಚ್ಚು ಮಂದಿ ಬಂದಿರುವುದರಿಂದ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದೆ ಇದು ಬಹಳ ಅಘಾತಕಾರಿ ವಿಚಾರ ಎನ್ನುತ್ತ ಸಿಎಂ ಚರ್ಚೆ ಆರಂಭಿಸಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮ, ಕೊರೊನಾ ಪರೀಕ್ಷೆ, ಪ್ರಕರಣಗಳ ಪತ್ತೆ ಕಾರ್ಯ, ಕ್ವಾರಂಟೈನ್, ಚಿಕಿತ್ಸೆಗೆ ಹಾಸಿಗಳ ಕೊರತೆ ಸೇರಿದಂತೆ ಕೊರೊನಾ ಸಂಬಂಧವಾಗಿ ಸವಿಸ್ತಾರವಾಗಿ ಸಿಎಂ ಚರ್ಚೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.