ಬೆಂಗಳೂರು: ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ರಿಟ್ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಿ ಪರಿಗಣಿಸಿದ ಹೈಕೋರ್ಟ್ ಸಿಐಡಿಯ ತನಿಖಾ ಪ್ರಗತಿ ವರದಿ ಸಲ್ಲಿಸಲು ಸೂಚನೆ ನೀಡಿದೆ.
ರಾಜಿ ಸಂಧಾನದ ಕೋರ್ಟ್ ಡಿಕ್ರಿ ನೆಪದಲ್ಲಿ ಆಸ್ತಿ ಕಬಳಿಕೆಯಾಗಿತ್ತು. ಈ ರೀತಿಯ 118 ಪ್ರಕರಣಗಳು ಪತ್ತೆಯಾಗಿದ್ದು, ಸಿಐಡಿ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ನಡೆದಿದೆ. ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸಲಾಗಿದೆ. ಆರೋಪಿತ ವಕೀಲರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 17ರೊಳಗೆ ತನಿಖಾ ಪ್ರಗತಿ ವರದಿ ಸಲ್ಲಿಸುವುದಾಗಿ ಸರ್ಕಾರಿ ವಕೀಲ ವಿಜಯ್ ಕುಮಾರ್ ಪಾಟೀಲ್ ಹೇಳಿದ್ದಾರೆ.
ಈ ಹಿಂದೆ ಶಾ ಹೀರಾಲಾಲ್ ಭಿಕಾಬಾಯಿ ರಿಟ್ ಅರ್ಜಿ ಸಲ್ಲಿಸಿದ್ದರು, ತನಿಖೆ ಪ್ರಗತಿ ಬಗ್ಗೆ ನ್ಯಾ.ಕೃಷ್ಣ ದೀಕ್ಷಿತ್ ವಿಳಂಬಗತಿಯ ಸಿಐಡಿ ತನಿಖೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು, ಪಿಐಎಲ್ ಆಗಿ ಪರಿಗಣಿಸಬೇಕೆಂದು ಮನವಿ ಮಾಡಿದ್ದು ಪ್ರಕರಣ ವಿಭಾಗೀಯ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.