ಬೆಂಗಳೂರು: ಬಿಬಿಎಂಪಿ ಮಹಿಳಾ ಪೌರ ಕಾರ್ಮಿಕ ಮಹಿಳೆಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಕಮಲಮ್ಮ (47) ಮೃತ ಮಹಿಳೆ. ಜೆಪಿ ನಗರದ ದಾಲ್ಮಿಯಾ ಸಿಗ್ನಲ್ ಬಳಿ ಎಂದಿನಂತೆ ಕಮಲಮ್ಮ ರಸ್ತೆ ಗುಡಿಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕ್ಯಾಂಟರ್ ವಾಹನ ರಸ್ತೆ ಗುಡಿಸುತ್ತಿದ್ದ ಕಮಲಮ್ಮನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಮಲಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದ ಬಳಿಕ ಕ್ಯಾಂಟರ್ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಜಯನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ಧಾರೆ. ತನಿಖೆ ಕೈಗೊಂಡಿರುವ ಪೊಲೀಸರು ಚಾಲಕನ ಪತ್ತೆಗೆ ಶೋಧ ಮುಂದುವರೆಸಿದ್ದಾರೆ.