ETV Bharat / state

ಆರ್​ ಆರ್​ ನಗರ ಬೈ ಎಲೆಕ್ಷನ್​: ಜಾಲಹಳ್ಳಿ, ಗೊರಗುಂಟೆಪಾಳ್ಯದಲ್ಲಿ ಸಿದ್ದು, ಡಿಕೆಶಿ ರಣಕಹಳೆ - The Road Show by Sidhu Dikeshi

ಆರ್​ ಆರ್​ ನಗರ ಕ್ಷೇತ್ರದ ಉಪಚುನಾವಣೆ ಗೆಲ್ಲಲು ಜಿದ್ದಿಗೆ ಬಿದ್ದಿರುವ ರಾಜಕೀಯ ಪಕ್ಷಗಳ ನಾಯಕರ ಪ್ರಚಾರ ಅಬ್ಬರ ಜೋರಾಗಿದೆ. ಇಂದು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ, ಡಿ ಬಾಸ್​ ದರ್ಶನ್​, ನಟಿ ಅಮೂಲ್ಯ ಮತಯಾಚನೆ ಮಾಡಿದ್ರೆ, ಕಾಂಗ್ರೆಸ್​ ಅಭ್ಯರ್ಥಿ ಕುಸುಮಾ ಪರ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಮತಬೇಟೆ ನಡೆಸಿದರು.

by-election
ಬೈ ಎಲೆಕ್ಷನ್
author img

By

Published : Oct 30, 2020, 6:38 PM IST

Updated : Oct 30, 2020, 7:37 PM IST

ಬೆಂಗಳೂರು: ಇಂದು ಬೆಳಗ್ಗೆಯಿಂದ ಕಾಂಗ್ರೆಸ್ ಗೋರಗುಂಟೆಪಾಳ್ಯ, ಜಾಲಹಳ್ಳಿ ಭಾಗದಲ್ಲಿ ಭರ್ಜರಿ ರೋಡ್ ಶೋ ನೆಡೆಸುತ್ತಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದರು. ಆರ್​.ಆರ್ ನಗರ ವಿಧಾನಸಭಾ ಪ್ರಚಾರದಲ್ಲಿ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಪರ ದೊಡ್ಡ ಮಟ್ಟದಲ್ಲಿ ಘಟಾನುಘಟಿ ನಾಯಕರು ಮತ ಬೇಟೆ ನಡೆಸಿದರು.

ಸಂಜೆಯವರೆಗೂ ನೆಡೆಯುವ ಪ್ರಚಾರದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೊಡಗಿಸಿಕೊಂಡಿದ್ದು, ಚುನಾವಣಾ ಪ್ರಚಾರ ಕಾವೇರುತ್ತಿದೆ. ಈ ವೇಳೆ ಸಿದ್ದರಾಮಯ್ಯ ಮಾತನಾಡಿ, ತನ್ನ ವಿರೋಧಿಗಳನ್ನು ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಎಂದು ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ. ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾಗಿರಬೇಕು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ ಎಂಬ ಕಾರಣಕ್ಕೆ ಅವರ ಪರ ಕೆಲಸ ಮಾಡಿದರೆ ಭವಿಷ್ಯದಲ್ಲಿ ಅವರು ಕಷ್ಟದ ದಿನಗಳನ್ನು ಎದುರಿಸಬೇಕಾಗುತ್ತೆ ಎಂದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಆರ್.ಆರ್. ನಗರ ಕ್ಷೇತ್ರದ ಅಭಿವೃದ್ಧಿಗೆ ರೂ.2,000 ಕೋಟಿ ಅನುದಾನ ನೀಡಿದ್ದೆ. ಆದರೂ ನಮಗೆ ದ್ರೋಹ ಮಾಡಿದ್ರಲ್ಲ ಮುನಿರತ್ನ ಅವರೇ, ಅಂತಹ ಅನ್ಯಾಯವನ್ನು ನಾವೇನು ಮಾಡಿದ್ವಿ ನಿಮ್ಗೆ? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಅಭ್ಯರ್ಥಿ ಎಂಬ ಕಾರಣಕ್ಕೆ ಕ್ಷೇತ್ರದ ಜನತೆ ಮುನಿರತ್ನ ಅವರನ್ನು ಎರಡು ಬಾರಿ ಆಯ್ಕೆ ಮಾಡಿದರೇ ಹೊರತು ಅವರು ದೊಡ್ಡ ನಾಯಕರು‌ ಎಂದಲ್ಲ. ನಾವೇನೂ ಅವರ ಕುತ್ತಿಗೆ ಹಿಡಿದು‌ ಪಕ್ಷದಿಂದ ಹೊರ ದಬ್ಬಲಿಲ್ಲ. ಸ್ವಾರ್ಥಕ್ಕಾಗಿ ಅವರು ಬಿಜೆಪಿಗೆ ಹೋದರು. ಇಂಥಹವರು ರಾಜಕೀಯ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದು ವಾಗ್ದಾಳಿ ನಡೆಸಿದರು.

ಸಿದ್ದು ಡಿಕೆಶಿಯಿಂದ ಜಾಲಹಳ್ಳಿ, ಗೊರಗುಂಟೆಪಾಳ್ಯದಲ್ಲಿ ರೋಡ್ ಷೋ

ಮುನಿರತ್ನ ಅವರದ್ದು ಬ್ಲಾಕ್​ಮೇಲ್ ರಾಜಕೀಯ. ತಮಗಾಗಿ ದುಡಿಯುವ ಕಾರ್ಯಕರ್ತರ ಮೇಲೆಯೇ ವಿರುದ್ಧ ಕೇಸು ಹಾಕಿಸುವುದು ಅವರ ಅಭ್ಯಾಸ.‌ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸಾವಿರಾರು ಸುಳ್ಳು ಕೇಸ್​ಗಳನ್ನು ಮುನಿರತ್ನ ಹಾಕಿಸಿದ್ದಾರೆ ಎಂದು ಆರೋಪಿಸಿದರು.

ಮೋದಿ ಮೋದಿ ಎಂದು ಕೂಗುವ ಯುವಕರಿಗೆ ನರೇಂದ್ರ ಮೋದಿಯವರು ಮೂರು ನಾಮ ಹಾಕಿದ್ದಾರೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಕೊಡುತ್ತೇವೆ ಎಂದವರು ಪ್ರಧಾನಿ ಮೋದಿ. ಈಗ ಇದ್ದ ಉದ್ಯೋಗ ಕಳೆದುಕೊಂಡು ಯುವಕರು ಬೀದಿ ಪಾಲಾಗಿದ್ದಾರೆ. ಉದ್ಯೋಗ ಕೇಳಿದರೆ ಪಕೋಡ ಮಾರಲು ಹೋಗಿ ಎನ್ನುತ್ತಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಈಗ ಭ್ರಷ್ಟಾಚಾರ ಪಾರದರ್ಶಕ:

ನಮ್ಮ ಸರ್ಕಾರದ ಅವಧಿಯಲ್ಲಿ ಆಡಳಿತದಲ್ಲಿ‌ ಪಾರದರ್ಶಕತೆ ಇತ್ತು. ಈಗ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆಡಳಿತದಲ್ಲಿ ಲಂಚಾವತಾರ ವಿಜೃಂಭಿಸುತ್ತಿದ್ದು, ಭ್ರಷ್ಟಾಚಾರ ಪಾರದರ್ಶಕವಾಗಿ ನಡೆಯುತ್ತಿದೆ ಎಂದು ಆರೋಪಿಸಿದರು. ಇಂಥಹ ಸರ್ಕಾರಕ್ಕೆ ಉಪ ಚುನಾವಣೆ ಫಲಿತಾಂಶ ಎಚ್ಚರಿಕೆಯ ಗಂಟೆಯಾಗಬೇಕು. ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಮತದಾರರು ತಕ್ಕ ಪಾಠ ಕಲಿಸಬೇಕು ಎಂದು ಸಿದ್ದರಾಮಯ್ಯ‌ ಮನವಿ ಮಾಡಿದರು.

ಮಾಜಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಸ್ವಾತಂತ್ರ್ಯ ಬಂದ ಬಳಿಕ ಕೊಟ್ಟ ಭರವಸೆ ಸಂಪೂರ್ಣ ಈಡೇರಿಸಿದ ಸರ್ಕಾರ ಕಾಂಗ್ರೆಸ್. ಮೋದಿ ಸಹ 2014 ರಲ್ಲಿ ಹಲವು ಭರವಸೆ ನೀಡಿದರು. ಆದರೆ ಒಂದನ್ನೂ ಸಹ ಈಡೇರಿಸಲಿಲ್ಲ. ಮೋದಿಯವರನ್ನು ಸುಳ್ಳಿನ ವಿಚಾರದಲ್ಲಿ ಸೋಲಿಸಲು ಯಾರಿಂದಲೂ ಸಾಧ್ಯವಿಲ್ಲ. ಟೀ ಮಾರ್ತಿದ್ದೇ ಅನ್ನುವವರು ಇಂದು ದಿನಕ್ಕೆ ನಾಲ್ಕು ಜತೆ ಬಟ್ಟೆ ಬದಲಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಕಾರ್ಮಿಕರು ಮತ್ತು ರೈತರ ವಿರೋಧಿ ಕಾನೂನು ಜಾರಿ ಮಾಡಿದ್ರು. ದೊಡ್ಡ ಉದ್ಯಮಿಗಳ ಪರ ಮೋದಿ ಇದ್ದಾರೆ, ಬಡವರ ಬಗ್ಗೆ ಬಿಜೆಪಿ ಮತ್ತು ಮೋದಿಗೆ ಕಾಳಜಿ ಇಲ್ಲ. ಎಂದು ಮೋದಿ ವಿರುದ್ಧ ರಾಮಲಿಂಗಾರೆಡ್ಡಿ ವಾಗ್ದಾಳಿ ನೆಡೆಸಿದರು.

ಅಭ್ಯರ್ಥಿ ಕುಸುಮಾ ಮಾತನಾಡುತ್ತಾ, ಕುಸುಮಾ ಯಾರು ಅನ್ನೋವರಿಗೆ ನಾನು ಈ ಕ್ಷೇತ್ರದ ಹೆಣ್ಣು ಮಗಳು. ನಾನು ಕನ್ನಡ ನಾಡಿನ ಹೆಣ್ಣು ಮಗಳು. ನಾನು ಹೆಣ್ಣು ಮಕ್ಕಳ ಪರವಾಗಿ ಧ್ವನಿ ಎತ್ತುತ್ತೇನೆ. ನಾನು ನಿಮ್ಮ ಕಡೆ ಒಂದು ಕೈ ಚಾಚಿದ್ದೇನೆ. ನೀವು ನನ್ನ ಕಡೆ ಒಂದು ಕೈಚಾಚಿ ನಿಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡಿ ಎಂದು ಕ್ಷೇತ್ರದ ಜನರ ಬಳಿ ಕೇಳಿಕೊಂಡರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಮಾಜಿ‌ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ಶಾಸಕರಾದ ಬೈರತಿ ಸುರೇಶ್, ಡಾ. ಅಜಯ್​ಸಿಂಗ್, ವಿಜಯಸಿಂಗ್ ಮತ್ತಿರರು ಹಾಜರಿದ್ದರು.

Last Updated : Oct 30, 2020, 7:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.