ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆ ಕೊಲೆ ಮಾಡಿ ಪರಾರಿಯಾಗಿದ್ದ ರೌಡಿಶೀಟರ್ ಕಾಲಿಗೆ ಗುಂಡು ಹೊಡೆದು ಆರೋಪಿಯನ್ನು ಬಂಧಿಸುವಲ್ಲಿ ಸಿ.ಕೆ.ಅಚ್ವುಕಟ್ಟು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಧನುಷ್ ಗುಂಡೇಟು ತಿಂದ ರೌಡಿಶೀಟರ್. ಈತನನ್ನು ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದು, ಪ್ರತಿಯಾಗಿ ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಪೊಲೀಸರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಟ್ಟಮಡು ನಿವಾಸಿ ಮಂಜುನಾಥ್ ಆಲಿಯಾಸ್ ದಡಿಯಾ ಮಂಜನನ್ನು ಗುರಿಯಾಗಿಸಿಕೊಂಡು ಮಾ. 23ರ ಮುಂಜಾನೆ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿ ಗಿರಿನಗರ ಠಾಣಾ ವ್ಯಾಪ್ತಿಯ ಹನುಮಗಿರಿ ಬೆಟ್ಟದ ಗುಹೆಯಲ್ಲಿ ಅವಿತುಕೊಂಡಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಜನಾರ್ಧನ್ ನೇತೃತ್ವದ ತಂಡ ಸ್ಥಳಕ್ಕೆ ತೆರಳಿ ಶೋಧ ನಡೆಸುತ್ತಿದ್ದಾಗ ಆರೋಪಿ ಏಕಾಏಕಿ ಲಾಂಗ್ನಿಂದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿದ್ದಾನೆ.
ಇನ್ನು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಪೊಲೀಸರು ಸೂಚಿಸಿದರೂ ಕೂಡ ಮಾತು ಕೇಳದಿದ್ದಕ್ಕೆ ರೌಡಿಶೀಟರ್ ಕಾಲಿಗೆ ಗುಂಡು ಹೊಡೆದು, ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈತನ ವಿರುದ್ಧ ಸಿ.ಕೆ.ಅಚ್ಚುಕಟ್ಟು ಠಾಣೆಯಲ್ಲಿ ಕೊಲೆ, ಕೊಲೆ ಯತ್ನ ಹಾಗೂ ಗಿರಿನಗರ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು.