ETV Bharat / state

ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ ಮಾಡಿ ಹಲ್ಲೆ ಮಾಡಿದ ರೌಡಿಶೀಟರ್ ಪರಾರಿ - ಈಟಿವಿ ಭಾರತ ಕನ್ನಡ

ಗಸ್ತಿನಲ್ಲಿದ್ದ ಪೊಲೀಸರು ನಂಬರ್ ಪ್ಲೇಟ್ ರಹಿತ ಸ್ಕೂಟರ್‌ನಲ್ಲಿ ಬಂದಿದ್ದ ಆರೋಪಿಯನ್ನು ತಡೆಯಲು ಮುಂದಾಗಿದ್ದಾರೆ. ಈ ವೇಳೆ, ಪೊಲೀಸರ ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿದ್ದಲ್ಲದೆ, ಮತ್ತೊಬ್ಬ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

rowdy-sheeter-assaulted-on-police-in-bengaluru
ಬೆಂಗಳೂರಲ್ಲಿ ಪೊಲೀಸರ ಮೇಲೆ ಹಲ್ಲೆಗೈದು ರೌಡಿಶೀಟರ್ ಪರಾರಿ
author img

By

Published : Oct 29, 2022, 10:00 AM IST

ಬೆಂಗಳೂರು: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೇಲೆ ರೌಡಿಶೀಟರ್ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಶುಕ್ರವಾರ ಸಂಜೆ ಇಲ್ಲಿನ ಗಿರಿನಗರ ಠಾಣೆ ವ್ಯಾಪ್ತಿಯ ಹೊಸಕೆರೆಹಳ್ಳಿ ಬಸ್ ನಿಲ್ದಾಣದ ಬಳಿ ನಡೆದಿದೆ.

ರೌಡಿಶೀಟರ್ ವಿಜಯ್ ಅಲಿಯಾಸ್ ಗೊಣ್ಣೆ ವಿಜಿ ಗಿರಿನಗರ ಠಾಣೆಯ ಕಾನ್ಸ್​ಟೇಬಲ್​ಗಳಾದ ಕಿರಣ್ ಹಾಗೂ ನೇತ್ರಾ ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿ ಮತ್ತೋರ್ವ ಕಾನ್ಸ್​ಟೇಬಲ್ ನಾಗೇಂದ್ರಗೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಸಿಬ್ಬಂದಿಯು ಗಸ್ತಿನಲ್ಲಿದ್ದಾಗ ನಂಬರ್ ಪ್ಲೇಟ್ ರಹಿತ ಸ್ಕೂಟರ್‌ನಲ್ಲಿ ಬಂದಿದ್ದ ಆರೋಪಿಯನ್ನು ತಡೆಯಲು ಮುಂದಾಗಿದ್ದಾರೆ. ಈ ವೇಳೆ, ಪೊಲೀಸರ ಮೇಲೆ ಪೆಪ್ಪರ್ ಸ್ಪ್ರೇ ಮಾಡಿದ್ದಲ್ಲದೇ, ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ಸದ್ಯ ಆರೋಪಿಯ ವಿರುದ್ಧ ಗಿರಿನಗರ ಪೊಲೀಸ್​ ಠಾಣೆಯಲ್ಲಿ ಐಪಿಸಿ ಸೆಕ್ಷನ್ 307ರಡಿ ಕೊಲೆಯತ್ನ, 332ರಡಿ ಸರ್ಕಾರಿ ಕೆಲಸಕ್ಕ ಅಡ್ಡಿಪಡಿಸುವ ಉದ್ದೇಶದ ಹಲ್ಲೆ ಹಾಗೂ 353ರಂತೆ ಕರ್ತವ್ಯ ನಿರತ ಸರ್ಕಾರಿ ಸಿಬ್ಬಂದಿ ಮೇಲೆ ಹಲ್ಲೆ ಆರೋಪದಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೆಲಸ‌ ಕೊಟ್ಟವನ ಯಾಮಾರಿಸಿ ಕಾರು ಸಮೇತ ₹75 ಲಕ್ಷ ದೋಚಿದ ಚಾಲಕನ ಬಂಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.