ETV Bharat / state

ಬೆಂಗಳೂರು: ಜೈಲಿಂದ ಬಿಡುಗಡೆಯಾಗುತ್ತಿದ್ದಂತೆ ರೌಡಿಶೀಟರ್ ಹತ್ಯೆ - ಈಟಿವಿ ಭಾರತ ಕ್ರೈಂ ಸುದ್ಧಿ

ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ರೌಡಿಶೀಟರ್​ನನ್ನ ಹಂತಕರು ಮಾರಾಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

ರೌಡಿಶೀಟರ್ ಹತ್ಯೆ
ರೌಡಿಶೀಟರ್ ಹತ್ಯೆ
author img

By

Published : Aug 5, 2023, 6:50 AM IST

Updated : Aug 5, 2023, 4:29 PM IST

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಪ್ರತಿಕ್ರಿಯೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿ ಹೊರ ಬಂದ ಕೆಲವೇ ಹೊತ್ತಿನಲ್ಲಿ ರೌಡಿಶೀಟರ್‌ವೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಸಿದ್ದಾಪುರ ಮಹೇಶ್ ಹತ್ಯೆಯಾದ ರೌಡಿಶೀಟರ್. ಮಹೇಶ್ ಅಪರಾಧ ಕೃತ್ಯದಲ್ಲಿ ಭಾಗಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದ. ಶುಕ್ರವಾರ ಬಿಡುಗಡೆಯಾಗಿ ಹೊಸ ರೋಡ್ ಜಂಕ್ಷನ್ ಬಳಿ ಕಾರಿನಲ್ಲಿ ತೆರಳುತ್ತಿದ್ದ. ಈ ವೇಳೆ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಮಹೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಹಳೆ ದ್ವೇಷದ ಹಿನ್ನೆಲೆ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ವಿರೋಧಿ ಗ್ಯಾಂಗ್‌ನಲ್ಲಿ ಮಹೇಶ್ ಲೀಡರ್ ಆಗಿದ್ದ ಎಂದು ತಿಳಿದು ಬಂದಿದೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಂತಕರ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚಿಸಿ ತನಿಖೆ‌ಗೆ ಇಳಿದಿರುವುದಾಗಿ ನಗರ ಆಗ್ನೇಯ ವಿಭಾಗದ‌ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಎದುರಾಳಿ ಗ್ಯಾಂಗ್'ನ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ, ಮೋಹನ ಅಲಿಯಾಸ್ ಡಬಲ್ ಮೀಟರ್ ಮೋಹನ್, ಸುನೀಲ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.

ಹಳೇ ವೈಷಮ್ಯಕ್ಕೆ ಹತ್ಯೆ: 2019ರ ಕೋವಿಡ್ ಲಾಕ್​ಡೌನ್ ಸಂದರ್ಭದಲ್ಲಿ ಹಾಸನದ ಫಾರ್ಮ್ ಹೌಸ್​ನಲ್ಲಿ ರೌಡಿಶೀಟರ್ ಲಿಂಗನನ್ನ ವಿಲ್ಸನ್ ಗಾರ್ಡನ್ ನಾಗನ ಬಣ ಹತ್ಯೆ ಮಾಡಿತ್ತು. ಮೋಹನ್, ನಂಜಪ್ಪ, ಕಣ್ಣನ್, ಕುಮಾರ್, ಪ್ರದೀಪ ಗ್ರೇಸ್ ವಾಲ್ಟರ್, ಸುನೀಲ್ ಸೇರಿದಂತೆ 16 ಜನರ‌ ತಂಡ ಲಿಂಗನನ್ನ ಕೊಲೆ ಮಾಡಿತ್ತು. ಹತ್ಯೆಗೆ ಪ್ರತಿಕಾರವಾಗಿ ಆತನ ಬಣದಲ್ಲಿದ್ದ ಸಿದ್ದಾಪುರ ಮಹೇಶ, ವಿಲ್ಸನ್ ಗಾರ್ಡನ್ ನಾಗನ ಅತ್ಯಾಪ್ತನಾಗಿದ್ದ ಮದನ್ ನನ್ನ ಮರ್ಡರ್​ ಮಾಡಿದ್ದ. ಇದು ನಾಗನ ಸಿಟ್ಟಿಗೆ ಕಾರಣವಾಗಿತ್ತು. ಅದೇ ಕಾರಣಕ್ಕೆ ತಡರಾತ್ರಿ ಮಹೇಶ ಜೈಲಿನಿಂದ ಹೊರ ಬರುತ್ತಿದ್ದಂತೆ ನಾಗನ ತಂಡದ ಸದಸ್ಯರು ಆತನನ್ನ ಹತ್ಯೆ ಮಾಡಿದ್ದಾರೆ.

ಬಳಿಕ ಮಾರಕಾಸ್ತ್ರಗಳನ್ನ ಎಲೆಕ್ಟ್ರಾನಿಕ್ ರಸ್ತೆಯ ಕೋನಪ್ಪನ ಅಗ್ರಹಾರದ ಬಳಿ ನಿರ್ಜನ ಪ್ರದೇಶದಲ್ಲಿ ಎಸೆದು ಪರಾರಿಯಾಗಿದ್ದಾರೆ. ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಇಂದು ಸಿಸಿಬಿ ಜಂಟಿ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಪ್ಪನ ಅಗ್ರಹಾರ ಠಾಣಾ ಪೊಲೀಸರಿಂದ ಮಾಹಿತಿ‌ ಪಡೆದಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಪ್ರತಿಕ್ರಿಯೆ: ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ರೌಡಿಶೀಟರ್ ಸಿದ್ದಾಪುರ ಮಹೇಶನ ಹತ್ಯೆ ಪ್ರಕರಣದ ಕುರಿತು‌ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, "ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಆಗ್ನೇಯ ವಿಭಾಗದ ಡಿಸಿಪಿಯವರು ಮೂರ್ನಾಲ್ಕು ತಂಡಗಳನ್ನ ರಚಿಸಿದ್ದಾರೆ‌. ಹತ್ಯೆಯಾದ ಮಹೇಶ್ ಸಿದ್ದಾಪುರ (ಬೆಂಗಳೂರು ದಕ್ಷಿಣ ವಿಭಾಗ) ವ್ಯಾಪ್ತಿಯ ರೌಡಿಶೀಟರ್. ಆತನ ಮೇಲೆ 2 ಕೊಲೆ ಪ್ರಕರಣ ಸೇರಿದಂತೆ ಒಟ್ಟು 11 ಪ್ರಕರಣಗಳಿದ್ದವು. ದಕ್ಷಿಣ ವಿಭಾಗದ ಪೊಲೀಸರು ಹಾಗೂ ಸಿಸಿಬಿ ಸಿಬ್ಬಂದಿ ತಂಡ ಸಹ ಈ ಪ್ರಕರಣದ ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಹಕರಿಸುತ್ತಿದೆ. ಶೀಘ್ರದಲ್ಲೇ ಆರೋಪಿಗಳನ್ನ ಪತ್ತೆ ಹಚ್ಚಲಾಗುವುದು" ಎಂದರು.

ಇದೇ ಸಂದರ್ಭದಲ್ಲಿ ಜುಲೈ 11ರಂದು ಡಿ.ಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಡಿಮಾರ್ಟ್ ಬಳಿ ನಡೆದಿದ್ದ ಮಡಿವಾಳ ಠಾಣೆಯ ರೌಡಿಶೀಟರ್ ಕಪಿಲ್ ಹತ್ಯೆಯ ಕುರಿತು ಮಾತನಾಡಿದ ಅವರು "ಕಪಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನ ಬಂಧಿಸಲಾಗಿದ್ದು, ಅವರ ವಿರುದ್ಧ ಕೋಕಾ ಕಾಯ್ದೆ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಜೈಲಿನಿಂದ‌ ಬಂದ 2ನೇ ದಿನದಲ್ಲೇ ಪೊಲೀಸರ ಮೇಲೆ ಹಲ್ಲೆ: ಆರೋಪಿಯನ್ನ ಮತ್ತೆ ಸೆರೆಮನೆಗೆ ತಳ್ಳಿದ ಪೊಲೀಸರು

Last Updated : Aug 5, 2023, 4:29 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.