ಬೆಂಗಳೂರು : ನಗರದಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಡಿ.ಜಿ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಭಟ್ಟಿ ಅಮ್ಜಾದ್ ಎಂಬುವವರನ್ನು ಅಪರಿಚಿತರು ನಿನ್ನೆ ಸಂಜೆ ಏಳು ಗಂಟೆ ವೇಳೆಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಘಟನೆ ಸಂಬಂಧ ನಗರ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿ.ಜಿ.ಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಿಸಿಟಿವಿ ದೃಶ್ಯ ಆಧಾರಿಸಿ ತನಿಖೆ ಮುಂದುವರೆಸಿದ್ದಾರೆ.
ತನಿಖೆ ವೇಳೆ ಭಟ್ಟಿ ಅಮ್ಜಾದ್ ಡಿ.ಜೆ.ಹಳ್ಳಿ ವ್ಯಾಪ್ತಿಯ ರೌಡಿಯಾಗಿದ್ದು ಹಳೆ ದ್ವೇಷದ ಹಿನ್ನೆಲೆ ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಕೊಲೆಯಾದ ಭಟ್ಟಿ ಅಮ್ಜಾದ್ ಕೂಡ ಡಿ.ಜೆ.ಹಳ್ಳಿ ಪೊಲೀಸರಿಗೆ ಬೇಕಾಗಿದ್ದ ಪ್ರಮುಖ ಆರೋಪಿಯಾಗಿದ್ದು, ತನಿಖೆಗೆ ಸಹಕರಿಸದೆ ತಲೆಮರೆಸಿಕೊಂಡಿದ್ದ. ಈತನ ಮೇಲೆ ಕೊಲೆ, ಕೊಲೆಯತ್ನ, ಸುಲಿಗೆ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.