ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.
ಸೊಹೈಲ್ (38) ಮೃತ ರೌಡಿ ಶೀಟರ್. ರೌಡಿಶೀಟರ್ ತನ್ವೀರ್ ಸಹಚರನಾಗಿದ್ದ ಈತನನ್ನು ಹಳೆ ವೈಷಮ್ಯದ ಹಿನ್ನೆಲೆ ವಿರೋಧಿ ಗುಂಪು ಕೊಚ್ಚಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಮೋದಿ ರಸ್ತೆಯಲ್ಲಿ ಘಟನೆ ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಡಿ.ಜೆ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.