ETV Bharat / state

ಬೆಂಗಳೂರು ಪೊಲೀಸರಿಂದ ಆಪರೇಷನ್... 180 ರೌಡಿಗಳ ಮೇಲೆ ದಾಳಿ, 22 ಡ್ರಗ್​ ಪೆಡ್ಲರ್ ವಶಕ್ಕೆ - ಡಿಸಿಪಿ ನೇತೃತ್ವದಲ್ಲಿ ರೌಡಿಶೀಟರ್​ಗಳ ಮನೆ ಮೇಲೆ ದಾಳಿ

ಇಂದು ಬೆಳಗ್ಗೆ ಬೆಂಗಳೂರು ನಗರ ಪಶ್ಚಿಮ ವಿಭಾಗದ ಪೊಲೀಸರು 180 ರೌಡಿಶೀಟರ್​​ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ROWDY SHEETERS HOUSES RAIDED BY WEST DIVISION POLICE
ರೌಡಿಶೀಟರ್ಸ್​ ಮನೆಗಳ ಮೇಲೆ ರೇಡ್
author img

By

Published : Nov 7, 2021, 3:48 PM IST

Updated : Nov 7, 2021, 9:29 PM IST

ಬೆಂಗಳೂರು: ಇಂದು ಬೆಳಗ್ಗೆ ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿರುವ ಬೆಂಗಳೂರು ಪೊಲೀಸರು ಎಚ್ಚರಿಕೆ ಕೊಟ್ಟಿದ್ದಾರೆ. ಇದೇ ವೇಳೆ, ಬೆಳಗ್ಗೆಯೇ ತೆರೆದಿದ್ದ ವೈನ್‌ಶಾಪ್​ಗಳ ಮೇಲೂ ಪ್ರಕರಣ ದಾಖಲಿಸಿದ್ದಾರೆ.

ROWDY SHEETERS HOUSES RAIDED BY WEST DIVISION POLICE

ಬೆಳ್ಳಂಬೆಳಗ್ಗೆ 180 ರೌಡಿಗಳ ಮನೆ ಮೇಲೆ ರೇಡ್ ಮಾಡಿ, ಅಪರಾಧ ಚಟುವಟಿಕೆ ಮುಂದುವರೆಸಿದರೆ ತಕ್ಕ ಶಾಸ್ತಿ ಮಾಡುವುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾಗಿ ಡಿ.ಸಿ.ಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರ ಸೂಚನೆಯ ಮೇರೆಗೆ ಪಶ್ಚಿಮ ವಿಭಾಗದ ಕಾಟನ್ ಪೇಟೆ , ಚಾಮರಾಜಪೇಟೆ, ಜೆ.ಜೆ ನಗರ, ಕೆ.ಪಿ ಅಗ್ರಹಾರ, ಮಾಗಡಿ ರಸ್ತೆಯ ಪೊಲೀಸರು ಸೇರಿದಂತೆ ವಲಯದ ಸಿಬ್ಬಂದಿ 22 ಕ್ಕೂ ಹೆಚ್ಚು ಡ್ರಗ್ ಪೆಡ್ಲರ್​ಗಳನ್ನೂ ವಶಕ್ಕೆ ಪಡೆದು, 180ಕ್ಕೂ ಹೆಚ್ಚು ರೌಡಿಗಳ ಮನೆ ಮೇಲೆ ದಾಳಿ ನಡೆಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ರೌಡಿಗಳಿಗೆ ಪೊಲೀಸರಿಂದ ಶಾಕ್

ಇಬ್ಬರು ಎಸಿಪಿಗಳ ನೇತೃತ್ವದಲ್ಲಿ 600 ಕ್ಕೂ ಹೆಚ್ಚು ಸಿಬ್ಬಂದಿ ಬೆಳಗ್ಗೆ 5 ಗಂಟೆಯಿಂದ ಅಂಜಪ್ಪ ಗಾರ್ಡನ್, ನೇತಾಜಿ ನಗರ, ಗೋಪಾಲಪುರ, ಶ್ಯಾಮಣ್ಣ ಗಾರ್ಡನ್, ಬಾಪೂಜಿ ನಗರ ಸೇರಿದಂತೆ ಹಲವು ಏರಿಯಾಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು ಎಂದಿದ್ದಾರೆ.

ರೌಡಿಗಳು ಮುಖ್ಯವಾಹಿನಿಗೆ ಬಂದು ನೆಮ್ಮದಿಯ ಜೀವನ ನಡೆಸುವುದಾದರೆ ಪೊಲೀಸ್ ಸಿಬ್ಬಂದಿ ಎಲ್ಲಾ ರೀತಿಯ ಸಹಕಾರ ನೀಡುತ್ತಾರೆ. ಅಪರಾಧ ಚಟುವಟಿಕೆ ಮುಂದುವರೆಸಿದರೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ಮೂರು ಬಾರ್​ಗಳ ವಿರುದ್ಧ ಪ್ರಕರಣ:

ಬೆಳಗ್ಗೆ ಬಾರ್ ಬಾಗಿಲು ತೆರೆದು ಮದ್ಯ ಮಾರಾಟ ಮಾಡುತ್ತಿದ್ದ ಮೂರು ಬಾರ್ ಮಾಲೀಕರಿಗೆ ಎಚ್ಚರಿಕೆ ನೀಡಿ ಪ್ರಕರಣ ದಾಖಲಿಸಿದ್ದೇವೆ ಎಂದು ಸಂಜೀವ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ನಗರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು ಪಶ್ಚಿಮ ವಿಭಾಗದ ಪೊಲೀಸರು ಕಾರ್ಯಾಚರಣೆಗಿಳಿದರು. ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆದಿದೆ

ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ: ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಇ.ಡಿ ವಶಕ್ಕೆ

Last Updated : Nov 7, 2021, 9:29 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.