ETV Bharat / state

ಆರ್​ಆರ್​ ನಗರ ವಿಧಾನಸಭಾ ಬೈ ಎಲೆಕ್ಷನ್​: ನ.3ರಿಂದ ನಿಷೇಧಾಜ್ಞೆ ಜಾರಿ

author img

By

Published : Oct 29, 2020, 5:16 PM IST

ನವೆಂಬರ್ 3 ರಂದು ಆರ್​ಆರ್​ ನಗರ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಮತದಾನ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ನ.3ರ ಸಂಜೆ 6 ಗಂಟೆಯಿಂದ ನ.4 ಸಂಜೆ ಆರು ಗಂಟೆವರೆಗೆ 144 ಸೆಕ್ಷನ್​ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

kamal panth
ಕಮಲ್ ಪಂತ್

ಬೆಂಗಳೂರು: ರಾಜ ರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಹೊರಡಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.

ನವೆಂಬರ್ 3 ರಂದು ಮತದಾತ ನಡೆಯಲಿದ್ದು, ಮುಂಜಾಗ್ರತ ಕ್ರಮವಾಗಿ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ನ.3ರ ಸಂಜೆ 6 ಗಂಟೆಯಿಂದ ನ.4ರ ಸಂಜೆ ಆರು ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಿಷೇಧಾಜ್ಞೆ ಜಾರಿ ಅವಧಿಯಲ್ಲಿ 5ಕ್ಕಿಂತ ಹೆಚ್ಚಿನ ಜನರು ಗುಂಪು ಸೇರುವುದನ್ನು ನಿಷೇಧಿಸಿದೆ.

ಯಾವುದೇ ಸಂಘಟನೆಗಳು, ರಾಜಕೀಯ ಪಕ್ಷಗಳು, ಧಾರ್ಮಿಕ ಪಂಗಡಗಳು ಪ್ರತಿಭಟನೆ ನಡೆಸಲು ಅವಕಾಶವಿಲ್ಲ. ಭಾಷಣ ಅಥವಾ ಪ್ರಚೋದನಕಾರಿಯಾಗಿ ಮಾತನಾಡುವುದನ್ನು ನಿಷೇಧಿಸಿದೆ. ಬ್ಯಾನರ್ ಅಥವಾ ಫೆಕ್ಸ್ ಅಂಟಿಸುವುದನ್ನು ನಿಷೇಧಿಸಿದೆ.

144 ಸೆಕ್ಷನ್ ಅವಧಿಯಲ್ಲಿ ಚುನಾವಣಾ ಆಯೋಗ ನೀಡಿರುವ ಮಾರ್ಗಸೂಚಿ ಅನ್ವಯ ಮತದಾನದ ಹಿಂದಿನ 48 ಗಂಟೆಗಳ ಅವಧಿಯಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರು 10 ಜನರು ಮೀರದಂತೆ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ ಮಾಡುವುದಕ್ಕೆ ವಿನಾಯಿತಿ ನೀಡಲಾಗಿದೆ. ಎರಡು ದಿನಗಳ ಕಾಲ ಮದ್ಯ ಮಾರಾಟ, ಸಾಗಣೆ ಹಾಗೂ ಶೇಖರಣೆ ಮಾಡುವಂತಿಲ್ಲ ಎಂದು ಕಮಲ್​ ಪಂತ್​ ಆದೇಶ ಹೊರಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.