ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡನೆ ಮಾಡುತ್ತಿದ್ದು, ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಕರ್ನಾಟಕದ ಯಾತ್ರಿ ನಿವಾಸ ನಿರ್ಮಾಣಕ್ಕೆ 10 ಕೋಟಿ ಬಿಡುಗಡೆ ಮಾಡೋದಾಗಿ ಘೋಷಿಸಿದ್ದಾರೆ.
ಸಿದ್ದಗಂಗಾ ಶ್ರೀಗಳ ಸ್ಮೃತಿವನಕ್ಕೆ 2 ಕೋಟಿ ರೂಪಾಯಿ, ಪೇಜಾವರ ಶ್ರೀಗಳ ಸ್ಮೃತಿವನಕ್ಕೆ 2 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ಹೇಳಿದ್ದಾರೆ.
ಓದಿ: ಪೆಟ್ರೋಲ್, ಡೀಸೆಲ್ ತೆರಿಗೆಯಲ್ಲಿ ಯಥಾಸ್ಥಿತಿ: ಮುಂದ್ರಾಕ ಶುಲ್ಕ ಇಲ್ಲ
ಜೊತೆಗೆ ಉಡುಪಿ ಜಿಲ್ಲೆಯ ತ್ರಾಸಿ, ಮರವಂತೆ, ಒತ್ತಿನೆಣೆ, ಸೋಮೇಶ್ವರ ಸೇರಿ ಕಡಲ ತೀರ ಅಭಿವೃದ್ಧಿಗೆ 10 ಕೋಟಿ ರೂಪಾಯಿ ಘೋಷಿಸಿದ್ದಾರೆ.