ದೇವನಹಳ್ಳಿ: ಸ್ವಿಫ್ಟ್ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಆಂಧ್ರ ಮೂಲದ ಯುವಕರನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ.
ದೇವನಹಳ್ಳಿ ತಾಲೂಕಿನ ವಿಜಯಪುರ ಬೈಪಾಸ್ ರಸ್ತೆ ಬಳಿ ಅಬಕಾರಿ ಅಧಿಕಾರಿಗಳು ವಾಹನಗಳ ತಪಾಸಣೆ ಮಾಡುತ್ತಿರುವಾಗ, ವೆಂಕಟಾಪುರ ಕಡೆಯಿಂದ ದೇವನಹಳ್ಳಿ ಮಾರ್ಗವಾಗಿ ಬರುತ್ತಿದ್ದ ನೀಲಿ ಬಣ್ಣದ ಸ್ವಿಫ್ಟ್ ಕಾರ್ನ ಪರಿಶೀಲನೆ ನಡೆಸಿದ್ದಾರೆ. ಆಗ ಕಾರಿನಲ್ಲಿ 2 ಕೆಜಿ 700 ಗ್ರಾಂ ಒಣ ಗಾಂಜಾ ಹಾಗೂ ಎಲೆಗಳು ಪತ್ತೆಯಾಗಿದ್ದು, ಇದರ ಒಟ್ಟು ಮೌಲ್ಯ ರೂ. 9,50,500 ಆಗಿದೆ. ಎನ್.ಡಿ.ಪಿ.ಎಸ್. ಕಾಯಿದೆ 1985ರಡಿ ಪ್ರಕರಣವನ್ನು ದಾಖಲಿಸಲಾಗಿದೆ.
ಇದನ್ನೂ ಓದಿ:ಮೊಬೈಲ್ ಕಸಿದು ಪರಾರಿಯಾಗುತ್ತಿದ್ದ ಗ್ಯಾಂಗ್ ಈಗ ಪೊಲೀಸರ ಅತಿಥಿ
ಆರೋಪಿಗಳಾದ ಭರತ್, ಸೂರ್ಯ ಹಾಗೂ ಶ್ರೀಕಾಂತ್ ಇವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.