ಬೆಂಗಳೂರು: ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿ ಆಸೀಮ್ ಶರೀಫ್ ಬಂಧನವಾಗಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್ ಆತನ ಅರ್ಜಿಯನ್ನು ತಿರಸ್ಕರಿಸಿದೆ.
ಆರೋಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ಪೀಠ ಜಾಮೀನು ನಿರಾಕರಿಸಿ ಆದೇಶ ಹೊರಡಿಸಿದೆ.
ಓದಿ: ರಾಜ್ಯದಲ್ಲಿ 2,164 ಸೋಂಕಿತರು ಗುಣಮುಖ: 10 ಮಂದಿ ಕೋವಿಡ್ಗೆ ಬಲಿ
ಆರೋಪಿಯು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೈಕೋರ್ಟ್ ಗಮನಕ್ಕೆ ತರಲಾಯಿತು. ಆದರೆ, ಜಯದೇವ ಹೃದ್ರೋಗ ಸಂಸ್ಥೆ 2020ರ ಸೆ.06ರಂದು ನೀಡಿರುವ ವರದಿಯನ್ನು ಆಧರಿಸಿ ಎನ್‌ಐಎ ವಿಶೇಷ ನ್ಯಾಯಾಲಯ ಸೆ.8ರಂದು ಜಾಮೀನು ನಿರಾಕರಿಸಿ ಆದೇಶಿಸಿದೆ. ಹೀಗಾಗಿ ಮೇಲ್ಮನವಿಯಲ್ಲಿ ಈ ಅಂಶ ಪರಿಗಣಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು.
ಎನ್‌ಐಎ ವಿಶೇಷ ನ್ಯಾಯಾಲಯ ಹೊರಡಿಸಿದ ಆದೇಶ ಪ್ರಶ್ನಿಸಿ ಪ್ರಕರಣದ ಐದನೇ ಆರೋಪಿ ಆಸೀಮ್ ಶರೀಫ್ ಕ್ರಿಮಿನಲ್ ಮೇಲ್ಮನವಿ ಸಲ್ಲಿಸಿದ್ದರು. ಸದ್ಯ ನ್ಯಾಯಾಲಯ ಅರ್ಜಿ ತಿರಸ್ಕಾರ ಮಾಡಿದೆ.