ಬೆಂಗಳೂರು : ಸ್ಯಾಂಡಲ್ವುಡ್ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಧಾರವಾಡದಲ್ಲಿ ನಡೆಯುತ್ತಿರುವ ಆರ್‌ಎಸ್‌ಎಸ್ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ.
ಪುನೀತ್ ಅವರ ಅಗಲಿಕೆಯನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರು ಮತ್ತು ಅಭಿಮಾನಿಗಳಿಗೆ ಭಗವಂತನು ನೀಡಲಿ ಎಂದು ಆರ್‌ಎಸ್‌ಎಸ್ ಪ್ರಾರ್ಥಿಸುತ್ತದೆ ಎಂದು ಆರ್‌ಎಸ್‌ಎಸ್ ಕ್ಷೇತ್ರೀಯ ಸಂಘಚಾಲಕ ವಿ. ನಾಗರಾಜ್ ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಲದ ಮೂರು ದಿನಗಳ ಸಭೆಯು ಧಾರವಾಡದಲ್ಲಿ ಸಂಘಚಾಲಕ ಡಾ. ಮೋಹನ್ ಭಾಗವತ್ ಹಾಗೂ ದತ್ತಾತ್ರೇಯ ಹೊಸಬಾಳೆ ನೇತೃತ್ವದಲ್ಲಿ ನಡೆಯುತ್ತಿದೆ. ಸಭೆ ವೇಳೆ ಪುನೀತ್ ನಿಧನದ ಸುದ್ದಿ ತಿಳಿದು ಸಂತಾಪ ಸೂಚಿಸಲಾಯಿತು.
ಇದನ್ನೂ ಓದಿ: LIVE UPDATES: ನಟ ಪುನೀತ್ ರಾಜ್‌ಕುಮಾರ್ ಇನ್ನಿಲ್ಲ...ಗಣ್ಯರ ಸಂತಾಪ