ಬೆಂಗಳೂರು : ಲಾಕ್ಡೌನ್ ಹಿನ್ನೆಲೆ ಬಡವರಿಗೆ ಊಟ ಹಂಚುವ ಸಂದರ್ಭದಲ್ಲಿ ಮಹಿಳೆ ಹಾಗೂ ಇತರರ ಮೇಲೆ ಸಂಘಟನೆಯೊಂದರ ಸದಸ್ಯರು ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.
![letter](https://etvbharatimages.akamaized.net/etvbharat/prod-images/6693435_ltrrr.jpg)
ಅಮೃತಹಳ್ಳಿ ಬಳಿ ಇರುವ ದಾಸರಹಳ್ಳಿಯಲ್ಲಿ ಮಹಿಳೆ ಊಟ ಹಂಚುತ್ತಿದ್ದರು. ಆದರೆ, ಇದನ್ನು ತಪ್ಪಾಗಿ ಭಾವಿಸಿಕೊಂಡು ಸಂಘಟನೆಯ ಕೆಲವರು ಹಲ್ಲೆ ಮಾಡಿದ್ದಾರೆಂದು ಮಹಿಳೆ ಆರೋಪಿಸಿದ್ದಾರೆ. ಸದ್ಯ ಈ ಬಗ್ಗೆ ಅಮೃತಹಳ್ಳಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಈ ಕುರಿತು ಡಿಸಿಪಿ ಡಾ. ಭೀಮಾಶಂಕರ್ ಗುಳೇದ್ ಮಾತನಾಡಿ, ಮಹಿಳೆ ಮೇಲೆ ಹಲ್ಲೆ ನಡೆಸಿರೋದು ತಪ್ಪು. ಈ ಬಗ್ಗೆ ಕಾನೂನು ರೀತಿ ಕ್ರಮ ಜರುಗಿಸಲಾಗುತ್ತೆ, ತನಿಖೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.