ETV Bharat / state

ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ಸಲ್ಲಿಸಿದ ಆರ್​ಟಿಐ ಕಾರ್ಯಕರ್ತ

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಆರ್​ಟಿಐ ಕಾರ್ಯಕರ್ತ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

author img

By

Published : Jun 19, 2021, 4:26 AM IST

RTI activist filed a complaint, RTI activist filed a complaint against MP Tejasvi Surya, MP Tejasvi Surya, MP Tejasvi Surya news, ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲು, ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ಸಲ್ಲಿಸಿದ ಆರ್​ಟಿಐ ಕಾರ್ಯಕರ್ತ, ಬೆಂಗಳೂರು ಸುದ್ದಿ, ಸಂಸದ ತೇಜಸ್ವಿ ಸೂರ್ಯ ಸುದ್ದಿ,
ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ಸಲ್ಲಿಸಿದ ಆರ್​ಟಿಐ ಕಾರ್ಯಕರ್ತ

ಬೆಂಗಳೂರು: ಹೋಟೆಲ್ ಒಳಗೆ ಊಟ ಮಾಡಿ ಲಾಕ್‌ಡೌನ್ ಮಾನದಂಡಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರ್.ಟಿ.ಐ ಕಾರ್ಯಕರ್ತ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಗುರುವಾರ ಮಧ್ಯಾಹ್ನ ನೃಪತುಂಗಾ ರಸ್ತೆಯ ಡಿಜಿ ಮತ್ತು ಐಜಿಪಿ ಕಚೇರಿಯ ಪಕ್ಕದಲ್ಲಿರುವ ಹೋಟೆಲ್‌ನಲ್ಲಿ ಸೂರ್ಯ ಮತ್ತು ವ್ಯಕ್ತಿಯೊಬ್ಬರು ಊಟ ಮಾಡುತ್ತಿರುವುದು ಕಂಡುಬಂದಿದೆ ಎಂದು ವಿಜಯ್ ಡೆನ್ನಿಸಿ ಎನ್ನುವ ವ್ಯಕ್ತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಲಾಕ್‌ಡೌನ್ ಮಾನದಂಡಗಳ ಪ್ರಕಾರ, ಹೋಟೆಲ್ ಕೇವಲ ಪಾರ್ಸೆಲ್‌ಗಳನ್ನು ಮಾತ್ರ ನೀಡಬೇಕು. ಆದರೆ ಸೂರ್ಯ ಮತ್ತು ಇನ್ನೊಬ್ಬ ವ್ಯಕ್ತಿ ಊಟ ಮಾಡುತ್ತಿರುವುದು ಕಂಡು ಬಂದಿದೆ. ಈ ಪ್ರಕರಣ ಲಾಕ್‌ಡೌನ್ ಮಾನದಂಡಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಸಂಸದ ಮತ್ತು ವ್ಯಕ್ತಿಯ ಮೇಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಇತರ ವಿಭಾಗಗಳಡಿ ಪ್ರಕರಣ ದಾಖಲಿಸಬೇಕು ಎಂದು ದೂರಿನಲ್ಲಿ ಕೇಳಿಕೊಳ್ಳಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ದೂರುದಾರರು ಫೋಟೋಗಳನ್ನು ಸಲ್ಲಿಸಿದ್ದಾರೆ. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗಿದ್ದು, ಈ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.