ETV Bharat / state

Deputy speaker: ವಿಧಾನಸಭೆ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ - ವಿಧಾನಸಭೆ

ವಿಧಾನಸಭೆಯ 25ನೇ ಉಪಾಸಭಾಧ್ಯಕ್ಷರನ್ನಾಗಿ ರುದ್ರಪ್ಪ ಮಾನಪ್ಪ ಲಮಾಣಿ ಅವರನ್ನು ಆಯ್ಕೆ ಮಾಡಲಾಗಿದೆ.

rudrappa-manappa-lamani-elected-as-deputy-speaker
ವಿಧಾನಸಭೆ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧವಾಗಿ ಆಯ್ಕೆ
author img

By

Published : Jul 6, 2023, 3:18 PM IST

ಬೆಂಗಳೂರು : ವಿಧಾನಸಭೆಯ 25ನೇ ಉಪಸಭಾಧ್ಯಕ್ಷರಾಗಿ ರುದ್ರಪ್ಪ ಮಾನಪ್ಪ ಲಮಾಣಿ ಅವರು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು. ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ಅವಧಿಯ ನಂತರ ನಡೆದ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ರುದ್ರಪ್ಪ ಲಮಾಣಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಭಾಧ್ಯಕ್ಷ ಯು. ಟಿ. ಖಾದರ್‌ ಅವರು ಪ್ರಕಟಿಸಿದರು.

ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಅವರು ಉಪಸಭಾಧ್ಯಕ್ಷ ಸ್ಥಾನಕ್ಕೆ ರುದ್ರಪ್ಪ ಲಮಾಣಿ ಅವರ ಹೆಸರನ್ನು ಸೂಚಿಸಿದರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಖಂಡೇರಾಯನಹಳ್ಳಿಯ ರುದ್ರಪ್ಪ ಮಾನಪ್ಪ ಲಮಾಣಿ ಅವರು ಮೂರು ಬಾರಿ ಶಾಸಕರಾಗಿ ಮತ್ತು ಸಚಿವರಾಗಿ ಕೆಲಸ ನಿರ್ವಹಿಸಿದ ಅಪಾರ ಅನುಭವ ಹೊಂದಿದ್ದಾರೆ. ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರು ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಆಯ್ಕೆಯಾದ ರುದ್ರಪ್ಪ ಲಮಾಣಿ ಅವರ ಬಳಿ ತೆರಳಿ ಉಪಸಭಾಧ್ಯಕ್ಷರ ಸ್ಥಾನಕ್ಕೆ ಕರೆದುಕೊಂಡು ಬಂದರು.

ನಂತರ ಮಾತನಾಡಿದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಅವರು ಶಾಸಕ ರುದ್ರಪ್ಪ ಲಮಾಣಿ ಅವರು ಸರ್ವಾನುಮತದಿಂದ ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 1999ರಿಂದ ವಿಧಾನಸಭೆಗೆ ಬಂದಿರುವ ಅವರು ಮಂತ್ರಿಗಿರಿ ಸೇರಿದಂತೆ ಪಕ್ಷದ ಅನೇಕ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿದ್ದಾರೆ. ಎಲ್ಲರಿಂದ ಅಜಾತಶತ್ರು ಎಂದು ಹೆಸರು ಗಳಿಸಿದ್ದಾರೆ ಎಂದು ಅವರು ಬಣ್ಣಿಸಿದರು.

ರುದ್ರಪ್ಪ ಲಮಾಣಿ ಅವರ ಮೇಲೆ ಅಪಾರ ಪ್ರೀತಿ ಇಟ್ಟುಕೊಂಡಿದ್ದೇವೆ. ಇವರ ಅವಧಿಯಲ್ಲಿ ಎಲ್ಲರಿಗೂ ನ್ಯಾಯ ಸಿಗಲಿ. ಹೊಸ ಹೊಸ ನಾಯಕರನ್ನು ತಯಾರು ಮಾಡಲಿ. ಈ ದೊಡ್ಡ ಸ್ಥಾನವನ್ನು ಸಮರ್ಪಕವಾಗಿ ನಿರ್ವಹಿಸುವುದರ ಮೂಲಕ ಎಲ್ಲರ ಹೃದಯವನ್ನು ಗೆಲ್ಲಲಿ ಎಂದು ಶುಭ ಹಾರೈಸಿದರು.

ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ : ನಾವು ಅವರಿಗೆ ಬಹಳ ಬಲವಂತವಾಗಿ ಈ ಜವಾಬ್ದಾರಿ ನೀಡಿದ್ದೇವೆ. ಪಕ್ಷದ ಆದೇಶಕ್ಕೆ ತಲೆಬಾಗಿ ಈ ಜವಾಬ್ದಾರಿ ವಹಿಸಿದ್ದಾರೆ. ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಮಂತ್ರಿಗಳಾಗಿದ್ದವರು ಸ್ಪೀಕರ್ ಆಗಿದ್ದಾರೆ. ಮುಖ್ಯಮಂತ್ರಿ ಆಗಿದ್ದವರು ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿರುವ ಉದಾಹರಣೆ ನಾವು ನೋಡಿದ್ದೇವೆ. ರಾಜಕಾರಣ ಸಾಧ್ಯತೆಗಳ ಕಲೆ. ಇಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ. ಶತ್ರುಗಳು ಮಿತ್ರರಾಗುತ್ತಾರೆ. ಮುಖ್ಯಮಂತ್ರಿಗಳು, ಮಂತ್ರಿಗಳು ನಿಮ್ಮ ಬಳಿ ಬರಬೇಕು. ನೀವು ಏಕಪಕ್ಷೀಯವಾಗಿರಲು ಸಾಧ್ಯವಿಲ್ಲ. ಹೀಗಾಗಿ ನಿಮಗೆ ವಿರೋಧ ಪಕ್ಷದ ನಾಯಕರ ಪಕ್ಕದಲ್ಲಿ ಸ್ಥಾನ ನೀಡಲಾಗಿರುತ್ತದೆ. ಇದೊಂದು ನ್ಯಾಯ ನೀಡುವ ಸ್ಥಾನ. ಈ ಸ್ಥಾನದಲ್ಲಿ ಕೂತು ಎಲ್ಲರಿಗೂ ನ್ಯಾಯ ಒದಗಿಸಬೇಕು ಎಂದರು.

ನೂತನ ಶಾಸಕರಿಗೆ ಅವಕಾಶ ನೀಡಿ ನಾಯಕತ್ವ ರೂಪಿಸಿ. ಆ ಮೂಲಕ ಎಲ್ಲರ ಹೃದಯ ಗೆಲ್ಲಬೇಕು. ನೀವು ನಿಮ್ಮನ್ನು ಗೆಲ್ಲಬೇಕಾದರೆ ನೀವು ಬುದ್ಧಿ ಪ್ರಯೋಗಿಸಿ. ನೀವು ಬೇರೆಯವರನ್ನು ಗೆಲ್ಲಬೇಕಾದರೆ ಹೃದಯವಂತಿಕೆ ಪ್ರಯೋಗಿಸಿ ಎಂದು ಗಾಂಧೀಜಿ ಅವರು ಹೇಳಿದ್ದಾರೆ. ನಿಮ್ಮ ಜೊತೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಇರಲಿದೆ. ಸಚಿವರಾಗಿದ್ದವರು ಉಪಾಧ್ಯಕ್ಷರಾಗಿರುವುದಕ್ಕೆ ಬೇಸರ ಮಾಡಿಕೊಳ್ಳಬೇಡಿ. ನಿಮಗೆ ಮುಂದೆ ಬಹಳಷ್ಟು ಅವಕಾಶ ಸಿಗಲಿದೆ. ನಿಮಗೆ ಶುಭವಾಗಲಿ ಎಂದು ಹಾರೈಸಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನ ಅತ್ಯಂತ ಗೌರವಯುತವಾದ ಸ್ಥಾನ. ತಮ್ಮ ಅವಧಿಯಲ್ಲಿ ನ್ಯಾಯ ಎಲ್ಲರಿಗೂ ಸಿಗಲಿ. ತಮಗೆ ಇನ್ನಷ್ಟು ಉನ್ನತ ಸ್ಥಾನಗಳು ಸಿಗಲಿ ಎಂದರು. ಹಿರಿಯ ಶಾಸಕರು ಹಾಗೂ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ. ಜಯಚಂದ್ರ ಸೇರಿದಂತೆ ಅನೇಕ ಶಾಸಕರು ಮಾತನಾಡಿದರು.

ಈ ವೇಳೆ ವಿಧಾನಸಭೆಯ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮಾತನಾಡಿ, ಇಲ್ಲಿ ಬರುತ್ತೇನಂತ ಅಂದುಕೊಂಡಿರಲಿಲ್ಲ. ಸಚಿವರಾಗಿ ಕೆಲಸ ಮಾಡಬೇಕು ಎನ್ನುವ ಆಸೆ ಇತ್ತು. ಪಕ್ಷದ ನಿರ್ದೇಶನದ ಅನುಸಾರ ಮತ್ತು ಸದನದ ಎಲ್ಲ ಸದಸ್ಯರು ಪ್ರೀತಿಯಿಂದ ಅವಿರೋಧವಾಗಿ ಉಪಸಭಾಧ್ಯಕ್ಷನಾಗಿ ಆಯ್ಕೆ ಮಾಡಿರುವುದಕ್ಕೆ ಆಭಾರಿ ಎಂದರು. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉಪಸಭಾಧ್ಯಕ್ಷ ಸ್ಥಾನಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಹೇಳಿದರು.

ಇದನ್ನೂ ಓದಿ : 7ನೇ ವೇತನ ಆಯೋಗದ ವರದಿ ನಂತರ ಸರ್ಕಾರಿ ನೌಕರರ ವೇತನ ಪರಿಷ್ಕರಣೆ, ಖಾಲಿ ಹುದ್ಧೆಗಳ ಭರ್ತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.