ETV Bharat / state

ರುದ್ರೇಶ್ ಕೊಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ​​ ಪೂರ್ಣ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ​​ ಪೂರ್ಣಗೊಂಡಿದ್ದು, ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

rudresh-murder-accused-bail-plea-hearing-is-completed
ರುದ್ರೇಶ್ ಕೊಲೆ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ​​ ಪೂರ್ಣ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್
author img

By

Published : Jun 8, 2022, 8:54 AM IST

ಬೆಂಗಳೂರು: ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಇಬ್ಬರು ಪ್ರಮುಖ ಆರೋಪಿಗಳಾದ ಇರ್ಫಾನ್‌ ಪಾಷಾ ಮತ್ತು ಮೊಹಮದ್ ಮುಜೀಬುಲ್ಲಾ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್​​ ಪೂರ್ಣಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.

ಹೈಕೋರ್ಟ್​​ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್ ಹಾಗೂ ಶಿವಶಂಕರ ಅಮರಣ್ಣವರ ಅವರು ಮಂಗಳವಾರ ಇಬ್ಬರೂ ಆರೋಪಿಗಳು ಜಾಮೀನು ಮಂಜೂರು ಮಾಡುವಂತೆ ಕೋರಿದ್ದ ಅರ್ಜಿಗಳ ವಿಚಾರಣೆ ಅಂತಿಮಗೊಳಿಸಿದರು.

ಬೆಂಗಳೂರಿನ ಶಿವಾಜಿನಗರವನ್ನು ಬೆಚ್ಚಿ ಬೀಳಿಸಿದ್ದ ಆರ್​ಎಸ್​ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ಪೊಲೀಸರು 2016ರಲ್ಲಿ ಪ್ರಮುಖ ಆರೋಪಿಗಳಾದ ಇರ್ಫಾನ್‌ ಪಾಷಾ ಮತ್ತು ಮೊಹಮ್ಮದ್‌ ಮುಜೀಬುಲ್ಲಾ ಅಲಿಯಾಸ್‌ ಮೌಲಾರನ್ನು ಬಂಧಿಸಿದ್ದಾರೆ. ಬಳಿಕ ಕೋರ್ಟ್​ ಆದೇಶದಂತೆ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

ಇದನ್ನೂ ಓದಿ: ಪರಿಹಾರದ ಹಣ ನೀಡಲು 5 ಲಕ್ಷ ಲಂಚ: ಎಸಿಬಿ ಬಲೆಗೆ ಬಿದ್ದ ಇಂಜಿನಿಯರ್​

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.