ETV Bharat / state

ಆರ್​ಟಿಇ ಶುಲ್ಕ ಮರುಪಾವತಿ ನಿಯಮಗಳಲ್ಲಿ ಸಡಿಲಿಕೆ: ಸಚಿವ ಸುರೇಶ್ ಕುಮಾರ್ - Minister Suresh Kumar lastest news

ಶಾಲೆಗಳು ತಡವಾಗಿ ಆರಂಭವಾಗಿರುವುದು ಮತ್ತು ಮಕ್ಕಳ ಶಾಲಾ ಹಾಜರಾತಿಯನ್ನು ಪೋಷಕರು - ವಿದ್ಯಾರ್ಥಿಗಳ ವಿವೇಚನೆಗೆ ಬಿಟ್ಟು ಪ್ರಸ್ತುತ ವರ್ಷ ಹಾಜರಾತಿ ಕಡ್ಡಾಯವಲ್ಲ ಎಂದು ಶಿಕ್ಷಣ ಇಲಾಖೆಯೇ ಆದೇಶಿದೆ. ಆರ್​​ಟಿಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ಕುರಿತು ನಿಯಮದಲ್ಲಿ ಸಡಿಲಿಕೆ ಮಾಡಿ ವಿನಾಯ್ತಿ ನೀಡಬೇಕೆಂದು ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ

author img

By

Published : Feb 22, 2021, 5:26 PM IST

ಬೆಂಗಳೂರು: ಕೋವಿಡ್-19 ಸೋಂಕು ಹಿನ್ನೆಲೆ ಶಾಲೆಗಳಲ್ಲಿ ಹಾಜರಾತಿ ಮತ್ತು ದಾಖಲಾತಿ ಕಡಿಮೆಯಾಗಿರುವುದರಿಂದ ಪ್ರಸ್ತುತ ವರ್ಷಕ್ಕೆ ಸೀಮಿತಗೊಳಿಸಿ ಎಸ್​ಎಸ್​ ಎಲ್​​​ಸಿ ಪರೀಕ್ಷೆ ಬರೆಯುವ ಮತ್ತು ಆರ್​ಟಿಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ಕುರಿತ ನಿಯಮಗಳಲ್ಲಿ ವಿನಾಯ್ತಿ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಶಾಲೆಗಳು ತಡವಾಗಿ ಆರಂಭವಾಗಿರುವುದು ಮತ್ತು ಮಕ್ಕಳ ಶಾಲಾ ಹಾಜರಾತಿಯನ್ನು ಪೋಷಕರು - ವಿದ್ಯಾರ್ಥಿಗಳ ವಿವೇಚನೆಗೆ ಬಿಟ್ಟು ಪ್ರಸ್ತುತ ವರ್ಷ ಹಾಜರಾತಿ ಕಡ್ಡಾಯವಲ್ಲ ಎಂದು ಶಿಕ್ಷಣ ಇಲಾಖೆಯೇ ಆದೇಶಿದೆ. ಈ ಹಿನ್ನೆಲೆ ಖಾಸಗಿ ಅನುದಾನರಹಿತ ಶಾಲೆಗಳ ಹಿತದೃಷ್ಟಿಯಿಂದ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಮಕ್ಕಳಿಗೆ ಎಸ್​ಎಸ್​ಎಲ್​​ಸಿ ಪರೀಕ್ಷೆ ಬರೆಯುವ ಮತ್ತು ಆರ್​​ಟಿಇ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಹಾಜರಾತಿ ಮತ್ತು ದಾಖಲಾತಿ ಕುರಿತು ನಿಯಮದಲ್ಲಿ ಸಡಿಲಿಕೆ ಮಾಡಿ ವಿನಾಯ್ತಿ ನೀಡಬೇಕೆಂದು ಸಚಿವರು ಸೂಚಿಸಿದ್ದಾರೆ.

ರಾಜ್ಯದ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ದಾಖಲಾತಿ ಮತ್ತು ಹಾಜರಾತಿಗಳ ಆಧಾರದಲ್ಲಿ ಶಾಲೆಗಳ ಮಾನ್ಯತೆ ನವೀಕರಿಸುವ ಮೂಲಕ ವಿದ್ಯಾರ್ಥಿಗಳ ಆರ್​​ಟಿಇ ಶುಲ್ಕ ಮರುಪಾವತಿ ಮತ್ತು ಎಸ್​ಎಸ್​ಎಲ್​ಸಿ ಪರೀಕ್ಷೆಗಳನ್ನು ಬರೆಯಲು ಅವಕಾಶಗಳನ್ನು ಕಲ್ಪಿಸುವ ಪ್ರಕ್ರಿಯೆಗಳು ಪ್ರತಿ ಶೈಕ್ಷಣಿಕ ಸಾಲಿನಲ್ಲಿ ಸಾಮಾನ್ಯ ಪ್ರಕ್ರಿಯೆಗಳಾಗಿವೆ.

ಓದಿ:ಮದುವೆ ಸೇರಿ ಎಲ್ಲಾ ಸಭೆ-ಸಮಾರಂಭಗಳಲ್ಲಿ ಮಾರ್ಷಲ್ ನಿಯೋಜಿಸಲು ನಿರ್ಧಾರ : ಸಚಿವ ಡಾ.ಕೆ.ಸುಧಾಕರ್

ಆದರೆ, ಈ ವರ್ಷ ಕೊರೊನಾ ಹಿನ್ನೆಲೆ ಮಕ್ಕಳ ದಾಖಲಾತಿ ಕಡಿಮೆ ಇದೆ. ಹಾಗೆಯೇ ಹಾಜರಾತಿಯೂ ಕಡಿಮೆ ಇದೆ. ಅಲ್ಲದೇ ಇಲಾಖೆಯೇ ಹಾಜರಾತಿಗೆ ವಿನಾಯ್ತಿ ಸಹ ನೀಡಿದೆ. ಹೀಗಿರುವಾಗ ಖಾಸಗಿ ಅನುದಾನ ರಹಿತ ಶಾಲೆಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಪ್ರಸ್ತುತ ಶೈಕ್ಞಣಿಕ ವರ್ಷಕ್ಕೆ ಸೀಮಿತಗೊಳಿಸಿ ಈ ನಿಟ್ಟಿನಲ್ಲಿ ವಿನಾಯ್ತಿ ನೀಡುವುದು ಮತ್ತು ಉಳಿದ ಷರತ್ತುಗಳನ್ನು ಖಚಿತಪಡಿಸಿಕೊಂಡು ಕ್ರಮ ವಹಿಸಬೇಕೆಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಸಚಿವರು ಟಿಪ್ಟಣಿಯಲ್ಲಿ ಸೂಚಿಸಿದ್ದಾರೆ.

ಸರ್ಕಾರದ ಈ ಕ್ರಮದಿಂದಾಗಿ ಖಾಸಗಿ ಶಾಲೆಗಳಿಗೆ ಆರ್​ಟಿಇ ಶುಲ್ಕ ಮತ್ತು ಎಸ್​ಎಸ್​ಎಲ್​ಸಿ ಪರೀಕ್ಷೆಗೆ ವಿದ್ಯಾರ್ಥಿಗಳ ಹಾಜರಾತಿಗೆ ಇದ್ದ ಹಾಜರಾತಿ/ದಾಖಲಾತಿ ಸಂಖ್ಯೆ ಕುರಿತ ನಿಯಮ ಸಡಿಲಿಕೆಯಿಂದ ಪ್ರಸ್ತುತ ವರ್ಷಕ್ಕೆ ಸಂಬಂಧಿಸಿದಂತೆ ನಿರಾಳತೆ ಬಂದಂತಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.