ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಿಎಂ ಎಸ್ಎಂ ಕೃಷ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕಳೆದ ಭಾನುವಾರ ಹಿರಿಯ ಮುಖಂಡ ಎಸ್.ಎಂ ಕೃಷ್ಣ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಮಾಜಿ ಸಿಎಂ ಇದೀಗ ಸಂಪೂರ್ಣ ಗುಣಮುಖರಾಗಿ ಇಂದು ಬೆಳಗ್ಗೆ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಆಸ್ಪತ್ರೆಗೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಸಚಿವರು ಭೇಟಿ ನೀಡಿ, ಮಾಜಿ ಸಿಎಂ ಆರೋಗ್ಯ ವಿಚಾರಿಸಿದ್ದರು. ಈ ವೇಳೆ ತಾವು ಆರೋಗ್ಯವಾಗಿದ್ದು ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಎಸ್ ಎಂ ಕೃಷ್ಣ ಬೆಂಬಲಿಗರಿಗೆ ತಿಳಿಸಿದ್ದರು.
(ಓದಿ: ಮಳೆ ಅವಾಂತರ: 'ಬೆಂಗಳೂರು ಬ್ರ್ಯಾಂಡ್' ಉಳಿಸಿಕೊಳ್ಳಲು ಸಿಎಂಗೆ ಎಸ್.ಎಂ.ಕೃಷ್ಣ ಸಲಹೆ)