ETV Bharat / state

ಅಧಿಕಾರಿ, ಸಿಬ್ಬಂದಿಯಿಂದ ಕಮಿಷನ್ ಕೇಳುತ್ತಿರುವ ಕೃಷಿ ಸಚಿವರನ್ನು ವಜಾಗೊಳಿಸಿ: ಎಎಪಿ ಉಪಾಧ್ಯಕ್ಷ ಮೋಹನ್ ದಾಸರಿ - ಈಟಿವಿ ಭಾರತ್​ ಕನ್ನಡ ನ್ಯೂಸ್​

ಕೃಷಿ ಸಚಿವ ಚಲುವರಾಯ ಸ್ವಾಮಿ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಎಎಪಿ ಉಪಾಧ್ಯಕ್ಷ ಮೋಹನ್ ದಾಸರಿ ಒತ್ತಾಯಿಸಿದ್ದಾರೆ.

ಎಎಪಿ ಉಪಾಧ್ಯಕ್ಷ ಮೋಹನ್ ದಾಸರಿ
ಎಎಪಿ ಉಪಾಧ್ಯಕ್ಷ ಮೋಹನ್ ದಾಸರಿ
author img

By

Published : Aug 7, 2023, 9:53 PM IST

ಎಎಪಿ ಉಪಾಧ್ಯಕ್ಷ ಮೋಹನ್ ದಾಸರಿ ಹೇಳಿಕೆ

ಬೆಂಗಳೂರು : ಕೃಷಿ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯಿಂದ ತಿಂಗಳಿಗೆ ತಲಾ 6 ರಿಂದ 8 ಲಕ್ಷ ರೂ. ಕಮಿಷನ್ ಅನ್ನು ಕೃಷಿ ಸಚಿವ ಚಲುವರಾಯಸ್ವಾಮಿ ಕೇಳುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಎಎಪಿ ಉಪಾಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಕೃಷಿ ಸಚಿವರನ್ನು ವಜಾಗೊಳಿಸುವಂತೆ ಮತ್ತು ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಎಎಪಿ ರಾಜ್ಯ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಸಚಿವರು ತಮ್ಮ ಇಲಾಖೆಯ ಅಧಿಕಾರಿಗಳಿಂದ ಕಮಿಷನ್​ ಕೇಳುತ್ತಿದ್ದಾರೆಂದರೆ ಅದರಲ್ಲಿ ಸಿಎಂ ಸಿದ್ದರಾಮಯ್ಯನವರ ಪಾಲೆಷ್ಟು ಎಂದು ಜನ ಕೇಳುವ ಮೊದಲು ಚಲುವರಾಯಸ್ವಾಮಿಯನ್ನು ತಕ್ಷಣ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಲೋಕಾಯುಕ್ತದಲ್ಲಿ ಸುಮೊಟೋ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಸಚಿವರ ವಿರುದ್ಧ ರಾಜ್ಯಪಾಲರಿಗೆ ಧೈರ್ಯವಾಗಿ ದೂರು ಸಲ್ಲಿಸಿರುವ ಅಧಿಕಾರಿಗಳಿಗೆ ಸರ್ಕಾರ ರಕ್ಷಣೆ ನೀಡಬೇಕು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್​ ಅವರು ಖುದ್ದಾಗಿ ಪ್ರಕರಣವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಎಎಪಿ ದೊಡ್ಡ ಹೋರಾಟ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದರು.

ಮಂಡ್ಯ ಜಿಲ್ಲೆಯ ಮಂಡ್ಯ, ಮಳವಳ್ಳಿ, ಕೃಷ್ಣರಾಜಪೇಟೆ, ಪಾಂಡವಪುರ, ನಾಗಮಂಗಲ ಮತ್ತು ಮದ್ದೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಉಲ್ಲೇಖಿತ ದೂರು ಸಲ್ಲಿಸಿದ್ದಾರೆ. ಅಧಿಕಾರಿ ಮತ್ತು ಸಿಬ್ಬಂದಿಗೆ ತಲಾ 6 ರಿಂದ 8 ಲಕ್ಷ ನೀಡುವಂತೆ ಕೃಷಿ ಸಚಿವರು ಮಂಡ್ಯ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರ ಮೂಲಕ ಒತ್ತಡ ಹೇರುತ್ತಿದ್ದಾರೆ ಎಂದು ದೂರಿನಲ್ಲಿ ವಿವರಿಸಿದ್ದಾರೆ ಎಂದು ಮೋಹನ್​ ಮಾಹಿತಿ ಹೇಳಿದರು.

ಹಿಂದಿನ ಬಿಜೆಪಿ ಸರ್ಕಾರದ 40% ಕಮಿಷನ್, ಪೇಸಿಎಂ ವಿರುದ್ಧ ಸಿದ್ದರಾಮಯ್ಯ ರಾಜ್ಯಾದ್ಯಂತ ಹೋರಾಟ ನಡೆಸಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಹೋಗಿ ಸರ್ಕಾರ ಬದಲಾವಣೆ ಆಗಿದೆ. ನಾಯಕರು ಬದಲಾಗಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಬಂದ ಕೇವಲ ನಾಲ್ಕು ತಿಂಗಳು ಅಷ್ಟೇ. ಭ್ರಷ್ಟಾಚಾರ, ಕಮಿಷನ್ ದಂಧೆಯ ಅಸ್ತಿತ್ವ ಹಿಂದಿನಂತೆಯೇ ಇದ್ದು, ಮುಂದುವರೆಯುತ್ತಿದೆ. ಯಾವುದೇ ಬದಲಾವಣೆಯಾಗಿಲ್ಲ. ರೈತರ ಸಂಕಷ್ಟವೇನು ಎಂಬುದು ಗೊತ್ತಿದ್ದುಕೊಂಡು ಕೃಷಿ ಕ್ಷೇತ್ರದಲ್ಲಿ ಮಂತ್ರಿಗಳು ಭ್ರಷ್ಟಾಚಾರಕ್ಕೆ ಇಳಿದಿದ್ದಾರೆ. ಈಗಾಗಲೇ ಸಂಕಷ್ಟದಲ್ಲಿರುವ ರೈತರ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜಂಟಿ ಕೃಷಿ ನಿರ್ದೇಶಕ ಹೇಳಿಕೆ : ಮತ್ತೊಂದೆಡೆ, ಮಂಡ್ಯ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಅಶೋಕ್ ಕುಮಾರ್ ಮಾತನಾಡಿ, ನಮ್ಮ ಜಿಲ್ಲೆಯ ಅಧಿಕಾರಿಗಳಿಂದ ರಾಜಭವನಕ್ಕೆ ಯಾವುದೇ ದೂರು ಹೋಗಿಲ್ಲ. ನಾನು ಈಗಾಗಲೇ ಸಹಾಯಕ ನಿರ್ದೇಶಕರನ್ನು ಗೂಗಲ್ ಮೀಟ್ ಮೂಲಕ ಸಂಪರ್ಕಿಸಿದ್ದೇನೆ. ಅಧಿಕಾರಿಗಳು ನಾವು ದೂರು ನೀಡಿಲ್ಲ, ನಮಗೆ ಈ ಬಗ್ಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಲಂಚದ ಆರೋಪ ಕುರಿತು ರಾಜ್ಯಪಾಲರಿಗೆ ದೂರು.. ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.