ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ ನೀಡಿದ್ದಕ್ಕೆ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ವಿರೋಧ ಪಕ್ಷಗಳ ಗದ್ದಲದ ನಡುವೆಯೇ ಪಶುಸಂಗೋಪನಾ ಸಚಿವ ಪ್ರಭು ಚೌಹಣ್ ಅವರು ಬುಧವಾರ ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧ ವಿಧೇಯಕ ಮಂಡಿಸಿದರು. ಏಕಾಏಕಿ ಮಸೂದೆ ಮಂಡನೆಗೆ ಅವಕಾಶ ನೀಡಿದ ಕ್ರಮಕ್ಕೆ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿ ನಾಳೆಯ ಅಧಿವೇಶನ ಬಹಿಷ್ಕರಿಸಿದ್ದಾರೆ.
ಗೋ ಹತ್ಯೆ ನಿಷೇಧ ಕಾನೂನು ಅಂಗೀಕಾರ: ಇಂದು ತುರ್ತು ಶಾಸಕಾಂಗ ಸಭೆ ಕರೆದ ಸಿದ್ದರಾಮಯ್ಯ
ಗೋಹತ್ಯೆ ನಿಷೇಧ ವಿಧೇಯಕವನ್ನು ಅಂಗೀಕರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಅಭಿನಂದನೆಗಳು. ಇದರಿಂದ ಕೋಟ್ಯಂತರ ರೈತರು ಗೋ ಆರಾಧಕರ ಬಹುದಿನಗಳ ಬೇಡಿಕೆ ಈಡೇರಿದೆ. ಗೋವು ಭಾರತೀಯರ ಜೀವನ, ನಾಗರಿಕತೆ, ಸಂಸ್ಕೃತಿ, ಪರಂಪರೆಯ ಅವಿಭಾಜ್ಯ ಅಂಗವಾಗಿದೆ ಎಂದು ಸದಾನಂದಗೌಡ ಟ್ವೀಟ್ ಮಾಡಿದ್ದಾರೆ.