ETV Bharat / state

ಇಂದಿರಾ ಕ್ಯಾಂಟೀನ್​ಗಳಲ್ಲಿ ನಂದಿನಿ ಉತ್ಪನ್ನಗಳ ಮಾರಾಟಕ್ಕೆ ಚಿಂತನೆ: ಕೆಎಂಎಫ್‌ ಅಧ್ಯಕ್ಷ ಭೀಮಾನಾಯ್ಕ್ - ಕೆಎಂಎಫ್‌

ಇಂದಿರಾ ಕ್ಯಾಂಟೀನ್​ಗೆ ಜನರನ್ನು ಆಕರ್ಷಿಸಲು ನಂದಿನಿ ಉತ್ಪನ್ನಗಳ ಮಾರಾಟ ಯೋಜನೆ ರೂಪಿಸಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.

ಕೆಎಂಎಫ್‌ ನೂತನ ಅಧ್ಯಕ್ಷ ಭೀಮಾನಾಯ್ಕ್
ಕೆಎಂಎಫ್‌ ನೂತನ ಅಧ್ಯಕ್ಷ ಭೀಮಾನಾಯ್ಕ್
author img

By

Published : Jun 22, 2023, 6:02 PM IST

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲ ಇಂದಿರಾ ಕ್ಯಾಂಟೀನ್​ನಲ್ಲಿ ಗುಣಮಟ್ಟದ ಆಹಾರದೊಂದಿಗೆ ನಂದಿನಿ ಉತ್ಪನ್ನಗಳನ್ನು ಮಾರಾಟ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಇದರಿಂದ ಉದ್ಯಮ ಮತ್ತಷ್ಟು ವಿಸ್ತರಿಸಿಕೊಳ್ಳಲಿದೆ ಎಂದು ನಗರದಲ್ಲಿ ಇಂದು ಕೆಎಂಎಫ್‌ ನೂತನ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದರು.

ಇಂದಿರಾ ಕ್ಯಾಂಟೀನ್‌ಗಳಲ್ಲಿ ನಂದಿನಿ ಉತ್ಪನ್ನಗಳ ಲಭ್ಯತೆ ಕುರಿತು ಶೀಘ್ರದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು. ಚಾಕೋಲೇಟ್, ಬಿಸ್ಕತ್, ಐಸ್ ಕ್ರೀಂ, ಹಾಲು ಹಾಗು ಮೊಸರು ಸೇರಿದಂತೆ ಹಲವು ನಂದಿನ ಉತ್ಪನಗಳು ಕೂಡ ಕ್ಯಾಂಟೀನ್‌ನಲ್ಲಿ ಲಭ್ಯವಾಗಲಿದೆ. ಈ ಮೂಲಕ ಕೆಎಂಎಫ್ ಮಾರುಕಟ್ಟೆಯನ್ನು ವಿಸ್ತರಣೆ ಮಾಡುವುದಕ್ಕೆ ಮುಂದಾಗಲಾಗುತ್ತಿದೆ. ಬಹುಮುಖ್ಯವಾಗಿ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್​ಗೆ ಜನರನ್ನು ಆಕರ್ಷಿಸಲು ಹೊಸ ಯೋಜನೆ ರೂಪಿಸಲಾಗುತ್ತಿದೆ ಎಂದು ಭೀಮಾನಾಯ್ಕ್ ಮಾಹಿತಿ ನೀಡಿದರು.

ಇದನ್ನೂ ಓದಿ : Indira Canteen: ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟೀನ್ ಪ್ರಾರಂಭ - ಸಿಎಂ ಸಿದ್ದರಾಮಯ್ಯ

ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ನಗರದ ಪ್ರತಿ ವಾರ್ಡ್‌ಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದರು. ಇಂದಿರಾ ಕ್ಯಾಂಟೀನ್‌ಗಳ ಪುನಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟೀನ್​ಗೆ ಬಿಬಿಎಂಪಿ ವತಿಯಿಂದ ಶೇ 70, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ. 50 ರಷ್ಟು ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ ಎಂದಿದ್ದರು.

ಇದನ್ನೂ ಓದಿ : ಅವಳಿ ನಗರದಲ್ಲಿ ಬಡವರ ಸ್ಟಾರ್ ಹೋಟೆಲ್​ ಇಂದಿರಾ ಕ್ಯಾಂಟೀನ್​ಗೆ ಮರುಜೀವ

ಬೆಂಗಳೂರು ಹೊರತುಪಡಿಸಿ ರಾಜ್ಯದ ವಿವಿಧೆಡೆಯ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ.70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದರು.

ಇನ್ನು, ಇಂದಿರಾ ಕ್ಯಾಂಟೀನ್ ಆಹಾರ ಕ್ರಮದಲ್ಲಿ ಬದಲಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ, ಕ್ಯಾಂಟೀನ್​ನಲ್ಲಿ ದೊರೆಯುವ ಆಹಾರದ ಕ್ರಮ ಬದಲಾಯಿಸುತ್ತಿದೆ. ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನಃ ಚಾಲನೆ ನೀಡಲಾಗುವುದು ಎಂದು ಹೇಳಿದ್ದರು.

ಇದನ್ನೂ ಓದಿ : ಆರ್ಥಿಕ ಸಂಕಷ್ಟದ ನಡುವೆಯೂ ಹೊಸದಾಗಿ 50 ಇಂದಿರಾ ಕ್ಯಾಂಟೀನ್​ಗಳನ್ನು ತೆರೆಯಲು ಮುಂದಾದ ಪಾಲಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.