ಬೆಂಗಳೂರು: ಭಾನುವಾರ ತಮ್ಮ ಮನೆಯಲ್ಲಿ ಕುಸಿದು ಬಿದ್ದ ಸಾಲುಮರದ ತಿಮ್ಮಕ್ಕ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೇಲೂರಿನ ಮನೆಯಲ್ಲಿ ಭಾನುವಾರ ಸಂಜೆ ಕುಸಿದು ಬಿದ್ದ ತಿಮ್ಮಕ್ಕ ಅವರನ್ನು ಹಾಸನದಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ವೇಳೆ ಸೊಂಟದ ಮೂಳೆ ಮುರಿದಿದೆ ಎಂಬುದು ತಿಳಿದುಬಂತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಜಯನಗರದ ಆಪೋಲೊ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತಜ್ಞ ವೈದ್ಯರು ಸಾಲುಮರದ ತಿಮ್ಮಕ್ಕ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇಂದು ವೈದ್ಯರು ಶಸ್ತ್ರ ಚಿಕಿತ್ಸೆ ನಡೆಸಲಿದ್ದಾರೆ. ಸದ್ಯ ತಿಮ್ಮಕ್ಕ ಅವರು ಆರೋಗ್ಯವಾಗಿದ್ದಾರೆ ಎಂದು ದತ್ತುಪುತ್ರ ಉಮೇಶ್ ಸ್ಪಷ್ಟಪಡಿಸಿದ್ದಾರೆ.