ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿಯಿಟ್ಟ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮೇಯರ್ ಸಂಪತ್ ರಾಜ್ ಪರಾರಿಯಾಗಿರುವ ಹಿನ್ನೆಲೆ ತನಿಖೆ ಚುರುಕುಗೊಂಡಿದ್ದು, ಕೆಲ ಸ್ನೇಹಿತರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.
ಕೊರೊನಾ ಸೋಂಕು ತಗುಲಿದೆ ಎಂದು ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಬಳಿಕ ಯಾರ ಕಣ್ಣಿಗೂ ಬೀಳದೆ ಪರಾರಿಯಾಗಿದ್ದಾರೆ. ಹೀಗಾಗಿ ಸಂಪತ್ ರಾಜ್ ಆಪ್ತ ಸ್ನೇಹಿತರಿಗೆ ವಿಚಾರಣೆಗೆ ಹಾಜರಾಗಲು ಸಿಸಿಬಿ ನೋಟಿಸ್ ನೀಡಿತ್ತು.
ಈಗಾಗಲೇ ಸಿಸಿಬಿ ಅಧಿಕಾರಿಗಳು ಆಸ್ಪತ್ರೆ ಸಿಬ್ಬಂದಿಯ ವಿಚಾರಣೆ ನಡೆಸಿ ಹಲವಾರು ಮಾಹಿತಿ ಪಡೆದಿದ್ದರು. ಆದರೆ ತನಿಖೆ ದೃಷ್ಟಿಯಿಂದ ಸಂಪತ್ ರಾಜ್ ಅವರ ಬಹಳ ಆತ್ಮೀಯ ಸ್ನೇಹಿತರ ವಿಚಾರಣೆ ಅಗತ್ಯವಿದೆ ಎಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಆದ್ರೆ ಸ್ನೇಹಿತರೀಗ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ.
ಸದ್ಯ ಸಂಪತ್ ರಾಜ್ ಕುಟುಂಬಸ್ಥರ ವಿಚಾರಣೆ ಸಿಸಿಬಿ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆಯುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹೊರ ರಾಜ್ಯಕ್ಕೂ ಸಿಸಿಬಿ ಪ್ರತ್ಯೇಕ ತಂಡ ಭೇಟಿ ನೀಡಿ ಶೋಧ ಕಾರ್ಯ ನಡೆಸುತ್ತಿದೆ.