ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ ಜಾಲದ ಪ್ರಮುಖ ಆರೋಪಿಯಾಗಿರುವ ಶಿವಪ್ರಕಾಶ್ ಅಲಿಯಾಸ್ ಚಿಪ್ಪಿ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ನಟಿ ರಾಗಿಣಿ ಅವರ ಸ್ನೇಹಿತನೆಂದು ಹೇಳಲಾಗಿರುವ ಆರೋಪಿ ವಿರುದ್ಧ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆ ಮತ್ತು ಐಪಿಸಿಯ ವಿವಿಧ ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ಬಂಧಿತರಾಗಿರುವ ಶಿಪಪ್ರಕಾಶ್ ಅಲಿಯಾಸ್ ಚಿಪ್ಪಿ ಪ್ರಕರಣದ ಎ1 ಆರೋಪಿಯಾಗಿದ್ದಾರೆ.
ಈ ಹಿನ್ನೆಲೆ ಬಂಧನ ಭೀತಿಗೆ ಒಳಗಾಗಿರುವ ಚಿಪ್ಪಿ ನಿರೀಕ್ಷಣಾ ಜಾಮೀನು ಕೋರಿ ನಗರದ 33ನೇ ಸಿಟಿ ಸಿವಿಲ್&ಸೆಷನ್ಸ್ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇನ್ನೂ ಪ್ರಕರಣ ದಾಖಲಾಗುತ್ತಿದ್ದಂತೆ ಶಿವಪ್ರಕಾಶ್ ತಲೆ ಮರೆಸಿಕೊಂಡಿದ್ದಾರೆ.
ಸಂಜನಾ ಆಪ್ತ ರಾಹುಲ್ನಿಂದ್ಲೂ ಜಾಮೀನು ಅರ್ಜಿ: ಪ್ರಕರಣದಲ್ಲಿ ಈಗಾಗಲೇ ಬಂಧಿತ 11ನೇ ಆರೋಪಿ ಹಾಗೂ ನಟಿ ಸಂಜನಾ ಆಪ್ತ ರಾಹುಲ್ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ನಗರದ 33ನೇ ಸಿಸಿಹೆಚ್ ಕೋರ್ಟ್ಗೆ ರಾಹುಲ್ ಪರ ವಕೀಲರು ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದಾರೆ.