ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ ಜಾಲದ ನಂಟು ಪ್ರಕರಣದ ಹಿನ್ನೆಲೆಯಲ್ಲಿ ಸಿಸಿಬಿ ಕಚೇರಿಗೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂಥ್ ಹಾಗೂ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಭೇಟಿ ನೀಡಿದರು.
ಸದ್ಯ ಸ್ಯಾಂಡಲ್ವುಡ್ ಡ್ರಗ್ ನಂಟು ವಿಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಅಷ್ಟೇ ಅಲ್ಲದೆ, ನಟಿಯರ ಆಪ್ತರನ್ನು ಅರೆಸ್ಟ್ ಮಾಡಿರುವ ಹಿನ್ನೆಲೆಯಲ್ಲಿ ನಗರ ಆಯುಕ್ತರು ಭೇಟಿ ನೀಡಿದರು. ಇನ್ನು ಡ್ರಗ್ ನಂಟು ಸಂಬಂಧ ಪೊಲೀಸ್ ಆಯುಕ್ತರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಸದ್ಯ ನಟಿಯರ ಆಪ್ತರಾದ ರವಿಶಂಕರ್, ರಾಹುಲ್, ಕಾರ್ತಿಕ್ನನ್ನು ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ.