ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಲಿಂಕ್ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರಾಗಿಣಿ ದ್ವಿವೇದಿಗೆ ಸದ್ಯದ ಮಟ್ಟಿಗೆ ನ್ಯಾಯಾಲಯದಿಂದ ರಿಲೀಫ್ ಸಿಕ್ಕಿಲ್ಲ.
ನಟಿ ರಾಗಿಣಿ ಪರ ವಕೀಲರು ಸಲ್ಲಿಸಿರುವ ಅರ್ಜಿ ಇದೇ ಸೆಪ್ಟೆಂಬರ್ 14ಕ್ಕೆ ಮುಂದೂಡಿಕೆಯಾಗಿದೆ. ಸಿಟಿ ಸಿವಿಲ್ ನ್ಯಾಯಾಲಯದ ಬಳಿ ಇರುವ ಎನ್ಡಿಪಿಎಸ್ ವಿಶೇಷ ಕೋರ್ಟ್ಗೆ ಹೊಸದಾಗಿ ನಿನ್ನೆ ಜಾಮೀನು ಕೋರಿ ಮುಂಬೈ ಮೂಲದ ವಕೀಲರು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ ಇಂದು ಸಿಸಿಬಿ ಪೊಲೀಸರು ಆಕ್ಷೇಪಣೆ ಹಾಕೋಕ್ಕೆ ನೋಟಿಸ್ ಕೊಟ್ಟು ಸೆಪ್ಟೆಂಬರ್ 14ಕ್ಕೆ ವಿಚಾರಣೆ ಮುಂದೂಡಿದೆ. ಹೀಗಾಗಿ ರಾಗಿಣಿಗೆ ಸದ್ಯಕ್ಕೆ ಯಾವುದೇ ರೀತಿಯಾದ ರಿಲೀಫ್ ಅನ್ನೋದು ಇಲ್ಲ.
ಮತ್ತೊಂದೆಡೆ ಇಂದಿಗೆ ರಾಗಿಣಿ ಸಿಸಿಬಿ ಕಸ್ಟಡಿ ಮುಕ್ತಾಯವಾಗುತ್ತಿದ್ದು, ನಟಿ ರಾಗಿಣಿ ಸಿಸಿಬಿ ಕಸ್ಟಡಿಗಾ ಅಥವಾ ಪರಪ್ಪನ ಅಗ್ರಹಾರ ಜೈಲಿಗಾ ಅನ್ನೋ ವಿಚಾರ ಕೆಲವೇ ಕ್ಷಣಗಳಲ್ಲಿ ಗೊತ್ತಾಗಲಿದೆ.
ಸದ್ಯ ಸಿಸಿಬಿ ಪೊಲೀಸರು ನ್ಯಾಯಾಧೀಶರ ಎದುರು ನಟಿಯನ್ನು ಹಾಜರುಪಡಿಸಲು ಎಲ್ಲಾ ರೀತಿಯ ಸಿದ್ಧತೆ ನಡೆಸುತ್ತಿದ್ದಾರೆ.