ETV Bharat / state

ಸ್ಯಾಂಡಲ್​ವುಡ್​ ಹಿರಿಯ ನಟಿ ಅಭಿನಯ ನಾಪತ್ತೆ: ಪೊಲೀಸರಿಂದ ಲುಕ್​ಔಟ್​ ನೋಟಿಸ್ ಜಾರಿ - DCP Laxman Nimbaragi

ಬಂಧನ ಭೀತಿಯಿಂದ ಸ್ಯಾಂಡಲ್​ವುಡ್​ನ ಹಿರಿಯ ನಟಿ ಅಭಿನಯ ಪರಾರಿ ಆಗಿದ್ದಾರೆ. ಹೀಗಾಗಿ, ಚಂದ್ರಾ ಲೇಔಟ್ ಪೊಲೀಸರು ಲುಕ್ ಔಟ್ ನೋಟಿಸ್​ ಹೊರಡಿಸಿದ್ದಾರೆ.

ಹಿರಿಯ ನಟಿ ಅಭಿನಯ
ಹಿರಿಯ ನಟಿ ಅಭಿನಯ
author img

By

Published : Feb 9, 2023, 10:07 PM IST

ಬೆಂಗಳೂರು : ವರದಕ್ಷಿಣೆಗಾಗಿ ಕಿರುಕುಳ ನೀಡಿದ ಆರೋಪದಡಿ ಜೈಲು ಶಿಕ್ಷೆಗೊಳಗಾಗಿದ್ದ ಸ್ಯಾಂಡಲ್​ವುಡ್‌ನ​ ಹಿರಿಯ ನಟಿ ಅಭಿನಯ ಅವರು ಬಂಧನ ಭೀತಿ ಎದುರಿಸುತ್ತಿದ್ದು, ಇದೀಗ ಪರಾರಿ ಆಗಿದ್ದಾರೆ. ಇದೀಗ ಇವರ ವಿರುದ್ಧ ಚಂದ್ರಾ ಲೇಔಟ್ ಪೊಲೀಸರು ಲುಕ್‌ ಔಟ್ ನೋಟಿಸ್ ಜಾರಿ ಮಾಡಿದ್ದಾರೆ.

ತನ್ನ ಅಣ್ಣನ ಹೆಂಡತಿ ಲಕ್ಷ್ಮೀದೇವಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಪ್ರಕರಣದ ಐದನೇ ಆರೋಪಿಯಾಗಿರುವ ಅಭಿನಯ, ತಾಯಿ ಜಯಮ್ಮ ಹಾಗೂ ಚೆಲುವರಾಜ್ ಎಂಬುವರಿಗೆ ಹೈಕೋರ್ಟ್ ಶಿಕ್ಷೆ ವಿಧಿಸಿದ್ದು, ಬಂಧಿಸುವಂತೆ ಪೊಲೀಸರಿಗೆ ಆದೇಶಿಸಿತ್ತು. ಈ ಆದೇಶದ ಬಗ್ಗೆ ಮೇಲ್ಮನವಿ ಸಲ್ಲಿಸುವುದಾಗಿ ಅಭಿನಯ ಈ ಹಿಂದೆ ಹೇಳಿದ್ದರು.

ಇದಾದ ಕೆಲವು ದಿನಗಳ ಬಳಿಕ ಕಣ್ಮರೆಯಾಗಿದ್ದು, ಪೊಲೀಸರು ಸತತವಾಗಿ ಶೋಧ ನಡೆಸಿದರೂ ಅಭಿನಯ ಹಾಗೂ ಕುಟುಂಬಸ್ಥರು ಪತ್ತೆಯಾಗಿಲ್ಲ. ಅಪರಾಧಿಗಳ ಬಗ್ಗೆ ಮಾಹಿತಿ ಸಿಕ್ಕರೆ ಚಂದ್ರಾ ಲೇಔಟ್ ಪೊಲೀಸರಿಗೆ ತಿಳಿಸುವಂತೆ ಡಿಸಿಪಿ ಲಕ್ಷ್ಮಣ್ ನಿಂಬರಗಿ ಮನವಿ ಮಾಡಿದ್ದಾರೆ.

ಕಾಶಿನಾಥ್ ನಿರ್ದೇಶಿಸಿದ 'ಅನುಭವ' ಸಿನಿಮಾ ಖ್ಯಾತಿಯ ಅಭಿನಯ ಅವರ ಅಣ್ಣ ಶ್ರೀನಿವಾಸ್ ಅವರೊಂದಿಗೆ 1998ರಲ್ಲಿ ಲಕ್ಷ್ಮೀದೇವಿ ವಿವಾಹವಾಗಿತ್ತು. ವರದಕ್ಷಿಣೆ ಕಿರುಕುಳ ಆರೋಪದಲ್ಲಿ 2002ರಲ್ಲಿ ಅಭಿನಯ ಹಾಗು ಗಂಡನ ಮನೆಯವರ ವಿರುದ್ಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಇದರ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.

2012ರಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಆರೋಪಿಗಳಿಗೆ ಎರಡು ವರ್ಷ ಶಿಕ್ಷೆ ವಿಧಿಸಿತ್ತು. ಜಿಲ್ಲಾ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದು, ಅಭಿನಯ ಅವರಿಗೆ ಎರಡು ವರ್ಷ ಜೈಲು ಶಿಕ್ಷೆಯಾಗಿತ್ತು.

ಇದನ್ನೂ ಓದಿ: ಮೈಸೂರಿನಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಮುಖ್ಯಮಂತ್ರಿಗೆ ಮನವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.