ETV Bharat / state

ಸಂಜನಾ ನ್ಯಾಯಾಂಗ ಬಂಧನ ವಿಸ್ತರಣೆ: ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದ ಗಲ್ರಾನಿ - ನಟಿ ಸಂಜನಾ ನ್ಯಾಯಾಂಗ ಬಂಧನ

ಸ್ಯಾಂಡಲ್​ವುಡ್​ಗೆ ಡ್ರಗ್ ಮಾಫಿಯಾ ನಂಟು ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ಸಂಜನಾ ಗಲ್ರಾನಿ ನ್ಯಾಯಾಂಗ ಬಂಧನ ಸೆಪ್ಟೆಂಬರ್ 30ರವರೆಗೆ ವಿಸ್ತರಣೆ‌ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಸಂಜನಾ ನ್ಯಾಯಾಂಗ ಬಂಧನ ವಿಸ್ತರಣೆ
ಸಂಜನಾ ನ್ಯಾಯಾಂಗ ಬಂಧನ ವಿಸ್ತರಣೆ
author img

By

Published : Sep 18, 2020, 6:44 PM IST

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ ಮಾಫಿಯಾ ನಂಟು ಆರೋಪ ಪ್ರಕರಣ ಸಂಬಂಧ ಸಂಜನಾ ಗಲ್ರಾನಿ ನ್ಯಾಯಾಂಗ ಬಂಧನವನ್ನ ಸೆಪ್ಟೆಂಬರ್ 30ರವರೆಗೆ ವಿಸ್ತರಣೆ‌ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಎರಡು ದಿನದ ಕಸ್ಟಡಿ ಇಂದಿಗೆ ಅಂತ್ಯವಾದ ಹಿನ್ನೆಲೆಯಲ್ಲಿ, ವಿಡಿಯೋ ಕಾನ್ಪರೆನ್ಸ್ ಮೂಲಕ ಸಿಟಿ ಸಿವಿಲ್ ನ್ಯಾಯಾಲಯದ ಎನ್​ಡಿಪಿಎಸ್ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ಸೆಪ್ಟೆಂಬರ್ 30ರವರೆಗೆ ನ್ಯಾಯಾಂಗ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ನ್ಯಾಯಾಂಗ ಬಂಧನ ವಿಸ್ತರಣೆ ಮಾಡುವಾಗ ಸಂಜನಾ ಗಲ್ರಾನಿ ನ್ಯಾಯಾಧೀಶರ ಎದುರು ಕಣ್ಣೀರು ಹಾಕಿ, "ನನಗೆ ಜಾಮೀನು ನೀಡಿ, ನಾನು 180 ಜನರಿಗೆ ಕೆಲಸ ಕೊಟಿದ್ದೇನೆ" ಎಂದು ಹೇಳಿದರು. ಈ ವೇಳೆ ನ್ಯಾಯಾಧೀಶರು ಜಾಮೀನು ಅರ್ಜಿ ವಿಚಾರದಲ್ಲಿ ಸಿಸಿಬಿ ಪೊಲೀಸರಿಗೆ ಆಕ್ಷೇಪಣೆ ಸಲ್ಲಿಕೆ ಮಾಡಲು ತಿಳಿಸಿದ್ದು, ನಾಳೆ ವಿಚಾರಣೆಗೆ ಬರಲಿದೆ ಎಂದು ಮನವರಿಕೆ ಮಾಡಿದ್ದಾರೆ.

ಇನ್ನು, ಇದೇ ವೇಳೆ ರಾಗಿಣಿ ಆಪ್ತ ವೈಭವ್ ಜೈನ್​ನನ್ನು ಸಹ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಹೆಚ್ವಿನ ವಿಚಾರಣೆಗೆ ಸಿಸಿಬಿ‌ ಮನವಿ ಮಾಡಿದ ಕಾರಣ 5 ದಿನಗಳ ಕಾಲ ವಶಕ್ಕೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.