ETV Bharat / state

ಸಿದ್ದರಾಮಯ್ಯ ಭೇಟಿಯಾಗಿ ಚರ್ಚಿಸಿದ ಶರತ್ ಬಚ್ಚೇಗೌಡ

ಈಗಾಗಲೇ ಸಾಕಷ್ಟು ಹಂತಗಳ ಸಮಾಲೋಚನೆ ನಡೆದಿದ್ದು ಸೇರ್ಪಡೆ ದಿನಾಂಕ ನಿಗದಿ ಯಾಗುವುದು ಬಾಕಿ ಇದೆ. ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಚರ್ಚಿಸುತ್ತಿರುವ ಅವರು, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸುಧೀರ್ಘ ಸಮಾಲೋಚನೆ ನಡೆಸಿದ್ದಾರೆ.

Sarath Bachegowda met Siddaramaiah
ಸಿದ್ದರಾಮಯ್ಯ ಭೇಟಿಯಾಗಿ ಚರ್ಚಿಸಿದ ಶರತ್ ಬಚ್ಚೇಗೌಡ
author img

By

Published : Jan 17, 2021, 3:59 AM IST

ಬೆಂಗಳೂರು: ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿರುವ ಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾದರು.

ರಾಜ್ಯ ರಾಜಕಾರಣದಲ್ಲಿ ಭವಿಷ್ಯದಲ್ಲಿ ನೆಲೆಕಂಡುಕೊಳ್ಳುವ ದೃಷ್ಟಿಯಿಂದ ಕಾಂಗ್ರೆಸ್ ಸೇರ್ಪಡೆಗೆ ಅವರು ನಿರ್ಧರಿಸಿದ್ದಾರೆ. ಈಗಾಗಲೇ ಕ್ಷೇತ್ರದಲ್ಲಿ ಎಂಟಿಬಿ ನಾಗರಾಜ್ ಸಾಕಷ್ಟು ಪ್ರಬಲ ಸ್ಪರ್ಧೆ ಒಡ್ಡುತ್ತಿರುವ ಹಿನ್ನೆಲೆ ಬಿಜೆಪಿಯಲ್ಲಿ ತಮಗೆ ಅವಕಾಶ ಸಿಗುವುದಿಲ್ಲ ಎಂದು ಮನಗಂಡಿರುವ ಶರತ್ ಬಚ್ಚೇಗೌಡ, ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ.

ತಂದೆ ಬಿಎನ್ ಬಚ್ಚೇಗೌಡ ಬಿಜೆಪಿಯಿಂದ ಚಿಕ್ಕಬಳ್ಳಾಪುರ ಸಂಸದರಾಗಿ ಆಯ್ಕೆಯಾಗಿದ್ದರೂ ಸಹ ತಮ್ಮ ರಾಜಕೀಯ ಬದುಕು ಬಿಜೆಪಿಯಲ್ಲಿ ಅಸಾಧ್ಯ ಎಂದು ಅರಿತಿರುವ ಅವರು ಅನಿವಾರ್ಯವಾಗಿ ಮತ್ತೊಂದು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್​ಗೆ ಸೇರ್ಪಡೆಯಾಗಲು ಮುಂದಾಗಿದ್ದಾರೆ.

ಈಗಾಗಲೇ ಸಾಕಷ್ಟು ಹಂತಗಳ ಸಮಾಲೋಚನೆ ನಡೆದಿದ್ದು ಸೇರ್ಪಡೆ ದಿನಾಂಕ ನಿಗದಿ ಯಾಗುವುದು ಬಾಕಿ ಇದೆ. ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಚರ್ಚಿಸುತ್ತಿರುವ ಅವರು, ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸುಧೀರ್ಘ ಸಮಾಲೋಚನೆ ನಡೆಸಿದ್ದಾರೆ.

ಪಕ್ಷೇತರ ಶಾಸಕರಾಗಿ 2019ರ ವಿಧಾನಸಭೆ ಚುನಾವಣೆಯಲ್ಲಿ ಹೊಸಕೋಟೆಯಿಂದ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿಯಾಗಿದ್ದ ಎಂಟಿಬಿ ನಾಗರಾಜ್ ವಿರುದ್ಧ ಗೆಲುವು ಸಾಧಿಸಿದ್ದ ಶರತ್ ಬಚ್ಚೇಗೌಡ, ರಾಜಕೀಯ ಭವಿಷ್ಯಕ್ಕಾಗಿ ಯಾವುದಾದರೂ ಪಕ್ಷ ಸೇರ್ಪಡೆಯಾಗುವ ಅನಿವಾರ್ಯ ಎದುರಿಸುತ್ತಿದ್ದಾರೆ. ವಿಧಾನ ಪರಿಷತ್ ಮೂಲಕ ರಾಜಕೀಯ ಮರುಜೀವ ಪಡೆದಿರುವ

ಎಂ ಟಿ ಬಿ ನಾಗರಾಜ್ ಎರಡು ದಿನದ ಹಿಂದೆಯಷ್ಟೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕ್ಷೇತ್ರದ ಮಾಜಿ ಶಾಸಕರಾಗಿ ಇವರು ಸಾಕಷ್ಟು ಅನುದಾನವನ್ನು ತಂದಿದ್ದು ಹಾಲಿ ಸದಸ್ಯರಾಗಿದ್ದು ಅನುದಾನ ತರುವಲ್ಲಿ ಶರತ್ ವಿಫಲರಾಗಿದ್ದಾರೆ. ಇದೇ ಸ್ಥಿತಿ ಮುಂದುವರಿದರೆ 2023ರ ವಿಧಾನಸಭೆ ಚುನಾವಣೆಯಲ್ಲಿ ಜನರ ಮುಂದೆ ತೆರಳಲು ಅವಕಾಶ ಇರುವುದಿಲ್ಲ. ಈ ಹಿನ್ನೆಲೆ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿ ಪ್ರತಿಪಕ್ಷದ ರೂಪದಲ್ಲಿ ಒತ್ತಡ ಹೇರಿಯಾದರೂ ಒಂದಿಷ್ಟು ಅನುದಾನ ತಂದು ಕ್ಷೇತ್ರದ ಜನರ ಒಲವು ಗಿಟ್ಟಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.