ಬೆಂಗಳೂರು: ಭಾರತದ ಪ್ರಥಮ ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮ ದಿನಾಚರಣೆ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಕಾಂಗ್ರೆಸ್ ಕಚೇರಿಯಲ್ಲಿಆಚರಿಸಲಾಯಿತು.
ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಭಾಗವಹಿಸಿದ್ದರು. ಗಣ್ಯರು ಇಬ್ಬರೂ ನಾಯಕರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಸರ್ದಾರ್ ವಲ್ಲಭಭಾಯ್ ಪಟೇಲ್ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮಾಡಿದ ಸಾಧನೆ, ರಾಷ್ಟ್ರಕ್ಕೆ ನೀಡಿದ ಕೊಡುಗೆ, ದೇಶದ ಪ್ರಗತಿಗೆ ಪಟ್ಟ ಶ್ರಮದ ಕುರಿತು ವಿವರಿಸಿದರು.