ಬೆಂಗಳೂರು : ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುವ ಶಶಿಕಲಾ, ದೇವನಹಳ್ಳಿ ಕೋಡಗುರ್ಕಿ ಬಳಿಯ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸಾರ್ಟ್‌ಗೆ ತೆರಳಿದ್ದಾರೆ. ಇದೇ ರೆಸಾರ್ಟ್‌ನಲ್ಲಿ ಶಶಿಕಲಾ ನಟರಾಜನ್ ವಾಸ್ತವ್ಯ ಹೂಡಲಿದ್ದಾರೆ. ಫ್ರೆಬ್ರವರಿ 11ರಂದು ಚೆನ್ನೈಗೆ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಫೆಬ್ರವರಿ 8ನೇ ತಾರೀಕಿನವರೆಗೂ ಪ್ರೆಸ್ಟೀಜ್ ಗಾಲ್ಫ್ ಶೈರ್ ರೆಸೋರ್ಟ್‌ನಲ್ಲೇ ತಂಗಲಿದ್ದಾರೆ.
8 ದಿನ ಹೋಂ ಕ್ವಾರಂಟೈನ್ನಲ್ಲಿರುವಂತೆ ವೈದ್ಯರು ಸೂಚಿಸಿದ್ದಾರೆ. ಕೋವಿಡ್ ಪಾಸಿಟಿವ್ ಬಂದಿದ್ದ ಹಿನ್ನೆಲೆ ವೈದ್ಯರು ಸೂಚನೆ ನೀಡಿದ್ದು, ಈ ಹಿನ್ನೆಲೆ ಕೆಲ ದಿನಗಳ ಕಾಲ ಬೆಂಗಳೂರಿನಲ್ಲೇ ಶಶಿಕಲಾ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.
ಓದಿ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶಶಿಕಲಾ: ಘೋಷಣೆ ಕೂಗಿ ಅಭಿಮಾನಿಗಳಿಂದ ಸ್ವಾಗತ