ETV Bharat / state

ಸವದತ್ತಿ ಯಲ್ಲಮ್ಮ ದೇವಸ್ಥಾನ ವ್ಯಾಪ್ತಿ ಸಂರಕ್ಷಣೆ ಕೋರಿ ಪಿಐಎಲ್: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ ವ್ಯಾಪ್ತಿಯ ನಿರ್ಬಂಧಿತ ಪ್ರದೇಶದಲ್ಲಿ ಕೈಗೊಂಡಿರುವ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಕೋರಿ ಸಲ್ಲಿಸಿರುವ ಪಿಐಎಲ್ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

savadatti-yallamma-temple-area-seeking-protection-pil-high-court-notice-to-govt
ಸವದತ್ತಿ ಯಲ್ಲಮ್ಮ ದೇವಸ್ಥಾನ ಪ್ರದೇಶ ರಕ್ಷಣೆ ಕೋರಿ ಪಿಐಎಲ್: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
author img

By

Published : Feb 6, 2020, 11:04 PM IST

ಬೆಂಗಳೂರು: ಇತಿಹಾಸ ಪ್ರಸಿದ್ಧ ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನ ವ್ಯಾಪ್ತಿಯ ನಿರ್ಬಂಧಿತ ಪ್ರದೇಶದಲ್ಲಿ ಕೈಗೊಂಡಿರುವ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಕೋರಿ ಸಲ್ಲಿಸಿರುವ ಪಿಐಎಲ್ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ದೇವಸ್ಥಾನದ ನೂರು ಮೀಟರ್ ವ್ಯಾಪ್ತಿಯೊಳಗೆ ಕಟ್ಟಡ ನಿರ್ಮಿಸುತ್ತಿರುವುದನ್ನು ಪ್ರಶ್ನಿಸಿ ಬೆಳಗಾವಿ ಜಿಲ್ಲೆ ಬೈಲಹೊಂಗಲ ನಿವಾಸಿ ಮಹೇಂದ್ರಗೌಡ ಸಲ್ಲಿಸಿರುವ ಸಾರ್ವಜನಿ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಾದಿಸಿದ ವಕೀಲೆ ವಿಜೇತಾ ಅವರು, ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನವು ಅತ್ಯಂತ ಪುರಾತನ ದೇವಾಲಯವಾಗಿದೆ. ವಿಜಯನಗರ ಸಾಮ್ರಾಜ್ಯದ ಕಷ್ಣದೇವರಾಯನ ಶಾಸನಗಳು ಇಲ್ಲಿವೆ, ಅವುಗಳನ್ನು ಕೇಂದ್ರದ ಸಂರಕ್ಷಿತ ಸ್ಮಾರಕಗಳ ಪಟ್ಟಿಗೆ ಸೇರಿಸಿದ್ದು, ದೇವಸ್ಥಾನದ ಸುತ್ತಲಿನ 100 ಮೀಟರ್ ಪ್ರದೇಶನ್ನು ನಿರ್ಬಂಧಿತ ಅಥವಾ ಸಂರಕ್ಷಿತ ಪ್ರದೇಶ ಎಂದು ಘೋಷಿಸಲಾಗಿದೆ. ಹೀಗಾಗಿ ದೇವಸ್ಥಾನದ ಆವರಣದಲ್ಲಿ ಕೈಗೊಂಡಿರುವ ಅನಧಿಕೃತ ಕಟ್ಟಡ ನಿರ್ಮಾಣ ಕಾಮಗಾರಿಗೆ ತಡೆ ನೀಡಬೇಕು ಎಂದು ಕೋರಿದರು.

ವಿಜೇತಾ ಅವರ ವಾದ ಆಲಿಸಿದ ಪೀಠ, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗಳ ಪ್ರತಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿತು. ಹಾಗೆಯೇ, ಅರ್ಜಿ ಸಂಬಂಧ ಕೇಂದ್ರದ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ, ರಾಜ್ಯದ ಪುರಾತತ್ವ ವಸ್ತು ಸಂಗ್ರಹಾಲಯ ಪಾರಂಪರಿಕಾ ಇಲಾಖೆಗೆ ಹಾಗೂ ರೇಣುಕಾ ಯಲ್ಲಮ್ಮ ದೇವಸ್ಥಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಿತು.

ಇದೇ ವೇಳೆ, ಕಟ್ಟಡ ನಿರ್ಮಾಣ ಕಾಮಗಾರಿ ಕುರಿತು ಆದೇಶಿದ ಪೀಠ, ಸದ್ಯ ದೇವಸ್ಥಾನದ 100 ಮೀಟರ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯು ಅರ್ಜಿಯ ಅಂತಿಮ ಇತ್ಯರ್ಥಕ್ಕೆ ಒಳಪಟ್ಟಿರುತ್ತದೆ. ಅರ್ಜಿದಾರರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಸೂಚನೆಗಳನ್ನು ಹಾಜರುಪಡಿಸಿದ ಬಳಿಕ, ನಿರ್ಮಾಣ ಕಾಮಗಾರಿಗೆ ತಡೆ ನೀಡುವ ಮಧ್ಯಂತರ ಮನವಿಯನ್ನು ಪರಿಗಣಿಸುತ್ತೇವೆ ಎಂದು ಸ್ಪಷ್ಟಪಡಿಸಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.