ETV Bharat / state

ಬಿಜೆಪಿ ವಿರುದ್ಧ ಬಂಡೆದ್ದ ಜಗದೀಶ್​ ಶೆಟ್ಟರ್​ಗೆ ಸೋಲು, ಲಕ್ಷ್ಮಣ ಸವದಿ ಜಯಭೇರಿ

author img

By

Published : May 13, 2023, 8:28 AM IST

Updated : May 14, 2023, 9:27 AM IST

ಟಿಕೆಟ್​ ನೀಡದ ಕಾರಣ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಜಗದೀಶ್​ ಶೆಟ್ಟರ್‌ಗೆ ಹಿನ್ನಡೆಯಾಗಿದೆ. ಇನ್ನೊಂದೆಡೆ ಲಕ್ಷ್ಮಣ ಸವದಿ ಗೆದ್ದಿದ್ದಾರೆ.

ಜಗದೀಶ್​ ಶೆಟ್ಟರ್
ಜಗದೀಶ್​ ಶೆಟ್ಟರ್

ಬೆಂಗಳೂರು: ಟಿಕೆಟ್​ ನೀಡದ್ದಕ್ಕೆ ಬಿಜೆಪಿ ವಿರುದ್ಧ ಬಂಡೆದ್ದು ಕಾಂಗ್ರೆಸ್​ ಸೇರಿದ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾದ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್​ ಕುಮಟಳ್ಳಿ ವಿರುದ್ಧ ಜಯಭೇರಿ ಸಾಧಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್ ಸೋಲು ಕಂಡಿದ್ದಾರೆ. ಇಲ್ಲಿ ಬಿಜೆಪಿಯ ಮಹೇಶ್ ಟೆಂಗಿನಕಾಯಿಗೆ ಮತದಾರರು ವಿಜಯಮಾಲೆ ಹಾಕಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ದೇಶದಲ್ಲಿಯೇ ಗಮನ ಸೆಳೆದಿರುವ ಮತ್ತು ಅಖಾಡದಲ್ಲಿ ಜಿದ್ದಾಜಿದ್ದಿಗೆ ಕಾರಣವಾಗಿರುವ 2 ಕ್ಷೇತ್ರಗಳೆಂದರೆ ಹುಬ್ಬಳ್ಳಿ- ಧಾರವಾಡ ಕೇಂದ್ರ ಹಾಗು ಬೆಳಗಾವಿಯ ಅಥಣಿ. ಬಿಜೆಪಿಯ ಕಟ್ಟಾಳುಗಳಾಗಿದ್ದ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ ಸವದಿ ಅವರು ಟಿಕೆಟ್ ವಂಚಿತರಾದ ಬಳಿಕ ಪಕ್ಷಕ್ಕೆ ಗುಡ್‌ಬೈ ಹೇಳಿ ಕಾಂಗ್ರೆಸ್ ಸೇರಿದ್ದರು.

ಬಿಜೆಪಿಯಿಂದ 2012 ರಲ್ಲಿ ಸಿಎಂ ಆಗಿದ್ದ ಜಗದೀಶ್ ಶೆಟ್ಟರ್ ಅವರು ಇದುವರೆಗೆ ಯಾವ ಚುನಾವಣೆಯಲ್ಲೂ ಸೋಲದೆ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 1999 ಹಾಗೂ 2013ರಲ್ಲೂ ಪ್ರತಿಪಕ್ಷ ನಾಯಕರಾಗಿ ಕೆಲಸ ಮಾಡಿದ್ದ ಅನುಭವ ಹೊಂದಿದ್ದಾರೆ. 2008- 13 ರ ಅವಧಿಯಲ್ಲಿ ಸ್ಪೀಕರ್ ಆಗಿ, ಬಳಿಕ ಗ್ರಾಮೀಣಾಭಿವೃದ್ಧಿ ಸಚಿವರಾಗಿ ಕೆಲಸ ಮಾಡಿದ್ದರು. ನಂತರ ಸದಾನಂದಗೌಡರ ರಾಜೀನಾಮೆಯಿಂದ ರಾಜ್ಯದ ಸಿಎಂ ಆಗಿ ಕೆಲಸ ಮಾಡಿದ್ದರು. 2013 ರಲ್ಲಿ ಇವರ ನೇತೃತ್ವದಲ್ಲೇ ಬಿಜೆಪಿ ಸರ್ಕಾರ ಚುನಾವಣೆ ಎದುರಿಸಿ ಕೇವಲ 40 ಸ್ಥಾನಗಳಿಗೆ ಕುಸಿತ ಕಂಡಿತ್ತು.

ಲಕ್ಷ್ಮಣ ಸವದಿ ಅವರು 2018 ರ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಪಕ್ಷ ಉಪಮುಖ್ಯಮಂತ್ರಿ ಮಾಡಿ ಅಧಿಕಾರ ನೀಡಿತ್ತು. ಇಷ್ಟೆಲ್ಲದರ ಮಧ್ಯೆ ಟಿಕೆಟ್ ನೀಡಿಲ್ಲ ಎಂಬ ಕಾರಣಕ್ಕಾಗಿ ಮುನಿಸಿಕೊಂಡ ಇಬ್ಬರೂ ನಾಯಕರು ಕಾಂಗ್ರೆಸ್ ಪಾಳಯ ಸೇರಿ ಮಾತೃ ಪಕ್ಷಕ್ಕೆ ಸೆಡ್ಡು ಹೊಡೆದಿದ್ದರು.

ಅಥಣಿಯಲ್ಲಿ ಬಿಜೆಪಿಗೆ ಶಾಕ್: ಟಿಕೆಟ್ ನಿರಾಕರಿಸಿದ್ದಕ್ಕೆ ಬಂಡೆದ್ದು ಕಾಂಗ್ರೆಸ್ ಸೇರಿ ಬಿಜೆಪಿಗೆ ಸೆಡ್ಡು ಹೊಡೆದಿರುವ ಲಿಂಗಾಯತ ಸಮುದಾಯದ ಇನ್ನೊಬ್ಬ ನಾಯಕ ಲಕ್ಷ್ಮಣ ಸವದಿ. ಬಿಜೆಪಿಯಿಂದ ಸ್ಪರ್ಧಿಸಿ 3 ಬಾರಿ ಶಾಸಕರಾಗಿದ್ದ ಸವದಿ ಈ ಬಾರಿ ಬಿಜೆಪಿ ವಿರುದ್ಧವೇ ಕಣದಲ್ಲಿದ್ದರು. ಮಹೇಶ್ ಕುಮಟಳ್ಳಿ ವಿರುದ್ಧ ಅಥಣಿ ಕ್ಷೇತ್ರದಲ್ಲಿ ಸ್ಪರ್ಧೆ ಒಡ್ಡಿ ಇದೀಗ ಅಮೋಘ ಜಯ ಸಾಧಿಸಿದ್ದಾರೆ. ಮಾಜಿ ಡಿಸಿಎಂ ಆಗಿದ್ದ ಸವದಿ 2004, 2008, 2013 ರ ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದರು.

2018 ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಹೇಶ್ ಕುಮಟಳ್ಳಿ ವಿರುದ್ಧ ಕೇವಲ 2741 ಮತಗಳ ಅಂತರದಿಂದ ಸೋತಿದ್ದರು. ಇದರ ಬಳಿಕ ವಿಧಾನಪರಿಷತ್​ಗೆ ಆಯ್ಕೆಯಾಗಿ, ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರದಲ್ಲಿ ಡಿಸಿಎಂ ಆಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಅಥಣಿಯಿಂದ ವಿಧಾನಸಭೆಗೆ ಸ್ಪರ್ಧಿಸಲು ಬಯಸಿದ್ದ ಸವದಿಗೆ ಬಿಜೆಪಿ ಟಿಕೆಟ್ ನೀಡಿರಲಿಲ್ಲ.

Last Updated : May 14, 2023, 9:27 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.