ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ಖಾಲಿ ಇರುವ ಒಟ್ಟು 6160 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯವಾರು ಕೆಲವು ಹುದ್ದೆಗಳನ್ನು ಮೀಸಲಾಗಿರಿಸಲಾಗಿದೆ. ಇದರ ಅನುಸಾರ ಕರ್ನಾಟಕಕ್ಕೆ ಒಟ್ಟು 175 ಹುದ್ದೆ ಮೀಸಲಾಗಿದೆ. ಅಪ್ರೆಂಟಿಸ್ ಆ್ಯಕ್ಟ್ 1961 ಅನುಸಾರ ಈ ಹುದ್ದೆಗಳ ಭರ್ತಿನಡೆಯಲಿದ್ದು, ಒಂದು ವರ್ಷದ ಅವಧಿಗೆ ಈ ಹುದ್ದೆಗೆ ತಾತ್ಕಾಲಿಕವಾಗಿ ಈ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಕನ್ನಡ ಭಾಷೆಯಲ್ಲೂ ಪರೀಕ್ಷೆ ಎದುರಿಸಬಹುದಾಗಿದೆ.
ಹುದ್ದೆ ವಿವರ: ಎಸ್ಬಿಐನಿಂದ ಕರೆಯಲಾದ 6,160 ಅಪ್ರೆಂಟ್ ಹುದ್ದೆಗಳ ಭರ್ತಿಯಲ್ಲಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 175 ಸ್ಥಾನಗಳ ಭರ್ತಿ ನಡೆಯಲಿದೆ. ರಾಜ್ಯದ ಪ್ರತಿ ರಾಜ್ಯಗಳಲ್ಲೂ ನಿರ್ದಿಷ್ಟ ಸಂಖ್ಯೆಯ ಹುದ್ದೆ ಭರ್ತಿ ನಡೆಸಲಾಗುವುದು
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೆ ವಿಷಯದಲ್ಲಿ ಪದವಿಯನ್ನು ಹೊಂದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷದಿಂದ ಗರಿಷ್ಠ ವಯೋಮಿತಿ 28 ವರ್ಷ ಆಗಿದೆ. ಇನ್ನು ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ಅಭ್ಯರ್ಥಿಗಳಿಗೆ ಎಸ್ಬಿಐ ನಿಯಮ ಅನುಸಾರ ಮೀಸಲಾತಿ ನೀಡಲಾಗುವುದು.
ವೇತನ: ಒಂದು ವರ್ಷದ ಅಪ್ರೆಂಟಿಸ್ ಅವಧಿಯಲ್ಲಿ ಮಾಸಿಕ 15 ಸಾವಿರ ರೂ ಗೌರವ ವೇತನ ನೀಡಲಾಗುವುದು. ಅಪ್ರೆಂಟಿಸ್ಗಳು ಬ್ಯಾಂಕ್ನ ಇನ್ನಿತರ ಅಲೋಯೆನ್ಸ್ ಮತ್ತು ಪ್ರಯೋಜನಕ್ಕೆ ಒಳಪಟ್ಟಿರುವುದಿಲ್ಲ
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ, ಇಡಬ್ಲ್ಯೂಸಿ, ಒಬಿಸಿ ಅಭ್ಯರ್ಥಿಗಳಿಗೆ 300 ರೂ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್ಲೈನ್ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು. ಇದೆ ವೇಳೆ ಅಭ್ಯರ್ಥಿಗಳ ಸ್ಥಳೀಯ ಭಾಷಾ ಪರೀಕ್ಷೆಯನ್ನು ನಡೆಸಲಾಗುವುದು. ನಂತರ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ತಪಾಸಣೆ ನಡೆಸಲಾಗುವುದು.
ಕರ್ನಾಟಕದ ಪರೀಕ್ಷಾ ಕೇಂದ್ರ: ಬೆಂಗಳೂರು, ಬೆಳಗಾಂ, ಕಲ್ಬುರ್ಗಿ, ಹುಬ್ಬಳ್ಳಿ ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬಹುದಾಗಿದೆ.
ಈ ಹುದ್ದೆಗೆ ಅಭ್ಯರ್ಥಿಗಳು ಸೆಪ್ಟೆಂಬರ್ 1ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಸಲು ಕಡೆಯ ದಿನಾಂಕ ಸೆಪ್ಟೆಂಬರ್ 21 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ವೀಕ್ಷಣೆಗೆ sbi.co.in ಜಾಲತಾಣಕ್ಕೆ ಭೇಟಿ ನೀಡಬಹುದಾಗಿದೆ.
ಇದನ್ನೂ ಓದಿ: ರಾಷ್ಟ್ರೀಯ ಸಣ್ಣ ಕೈಗಾರಿಕಾ ನಿಗಮದಲ್ಲಿದೆ 51 ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳು.. ನೇಮಕಾತಿಗೆ ಅರ್ಜಿ ಆಹ್ವಾನ