ಬೆಂಗಳೂರು : ಎಸ್ಸಿ ಎಸ್ಟಿ ಮೀಸಲಾತಿ ಕಾಂಗ್ರೆಸ್ ಪಕ್ಷದ ಕೂಸು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಗಮೋಹನ್ ದಾಸ್ ಕಮಿಟಿ ಮಾಡಿದ್ದಕ್ಕೆ ಇದು ಯಶಸ್ಸು ಕಂಡಿದೆ. ಜನರಿಗೆ ನ್ಯಾಯ ಒದಗಿಸಿಕೊಡಬೇಕೆಂಬುದು ಕಾಂಗ್ರೆಸ್ ಪಕ್ಷದ ಬಯಕೆಯಾಗಿದೆ ಎಂದು ಹೇಳಿದರು.
ಬಿಜೆಪಿಗೆ ಎಸ್ಸಿ ಎಸ್ಟಿ ಜನಾಂಗದ ಮೇಲೆ ನಂಬಿಕೆ ಇಲ್ಲ. ಅಧಿಕಾರಕ್ಕೆ ಬಂದ 24 ಗಂಟೆಯಲ್ಲೇ ಬಿಜೆಪಿ ಇದನ್ನು ಮಾಡಬೇಕಿತ್ತು. ಈಗಲೂ ಡಬಲ್ ಇಂಜಿನ್ ಸರ್ಕಾರ ಇದೆ. ಬರೀ ಪೇಪರ್ ನಲ್ಲಿ ಇಟ್ಟು ಚಾಕೊಲೇಟ್ ಕೊಡುವುದಕ್ಕೆ ಹೋಗಬೇಡಿ. ಸಿಎಂ ದೆಹಲಿಯಲ್ಲಿ ಕುಳಿತು ಪಾರ್ಲಿಮೆಂಟ್ ನಲ್ಲಿ ಇಟ್ಟು 9ನೇ ಶೆಡ್ಯೂಲ್ ನಲ್ಲಿ ಇದಕ್ಕೆ ಒಪ್ಪಿಗೆ ಪಡೆಯಲಿ ಎಂದು ಡಿಕೆಶಿ ಒತ್ತಾಯಿಸಿದರು.
ಇನ್ನು, ಭಾರತ್ ಜೋಡೋ ಯಾತ್ರೆ ಮಾಡಲು ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ದೆಹಲಿಯಲ್ಲಿ ಮೀಟಿಂಗ್ ಇದೆ. ಬಸ್ ಯಾತ್ರೆ ಬಗ್ಗೆ ನಾನೊಬ್ಬನೇ ಕುಳಿತು ನಿರ್ಧಾರ ಮಾಡುವುದಕ್ಕೆ ಆಗುವುದಿಲ್ಲ. ಎಲ್ಲ ನಾಯಕರ ಬಳಿ ಚರ್ಚೆ ಮಾಡಿ ಬಸ್ ಯಾತ್ರೆ ಬಗ್ಗೆ ನಿರ್ಧಾರ ಮಾಡುತ್ತೇವೆ. ಕಲೆಕ್ಟಿವ್ ಆಗಿ ಕುಳಿತು ನಿರ್ಧರಿಸಿ ಕಲೆಕ್ಟಿವ್ ಲೀಡರ್ಶಿಪ್ನಲ್ಲಿ ಮತ್ತೊಂದು ಯಾತ್ರೆ ಮಾಡುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ : ಪೊಲೀಸರಿಂದ ರಾಜಕೀಯ ಪಕ್ಷಗಳಿಗೆ ಅಡ್ಜಸ್ಟ್ಮೆಂಟ್: ಜೆ ಆರ್ ಲೋಬೋ ಆರೋಪ