ETV Bharat / state

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ ಹಗರಣ : ಠೇವಣಿದಾರರ ಪ್ರತಿಭಟನೆ

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ ಹಗರಣ ಬಯಲಾಗಿ ಒಂದು ವರ್ಷವಾಗಿದೆ. ಇಂದು ಶಾಂತಿಯುತ ಪ್ರತಿಭಟನೆ ನಡೆಸಲು ನಿರ್ಧರಿಸಿ ಠೇವಣಿದಾರರು ಪ್ರತಿಭಟನೆ ನಡೆಸಿದ್ದಾರೆ.

author img

By

Published : Jan 11, 2021, 12:57 PM IST

Scam of Guru Raghavendra co-operative Bank
ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ನ ಹಗರಣ

ಬೆಂಗಳೂರು : ಐಎಂಎ ಪ್ರಕರಣದ ರೀತಿಯಲ್ಲೇ ನಗರದಲ್ಲಿ ಮತ್ತೊಂದು ಹಗರಣ ಬಯಲಾಗಿ ಸುಮಾರು ಒಂದು ವರ್ಷವಾಗಿದೆ. ಆದ್ರೆ ಈ ಪ್ರಕರಣದ ಬಗ್ಗೆ‌ ವಂಚಿತರಿಗೆ ಇನ್ನೂ ಯಾವುದೇ ಮಾಹಿತಿ ದೊರೆತಿಲ್ಲ.

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ನ ಹಗರಣ

ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ನ ಹಗರಣ ಬಯಲಾಗಿ ಒಂದು ವರ್ಷವಾಗಿದ್ದರೂ, ವಂಚನೆಗೊಳಗಾದವರಿಗೆ ಯಾವುದೇ ಪರಿಹಾರ ಸಿಗದ ಕಾರಣ ಇಂದು ಠೇವಣಿದಾರರು ಶಾಂತಿಯುತ ಪ್ರತಿಭಟನೆ ನಡೆಸಿದ್ದಾರೆ. ಹಗರಣ ಬೆಳಕಿಗೆ ಬಂದು ಸುಮಾರು ಒಂದು ವರ್ಷ ಕಳೆದರೂ ಆರ್​ಬಿಐ ಮಾತ್ರ ಯಾವುದೇ ಮಾಹಿತಿ ನೀಡುತ್ತಿಲ್ಲ. ಇತ್ತ ಸಿಐಡಿ ಅಧಿಕಾರಿಗಳು ಕೂಡ ಆರೋಪಿಗಳ ಬಗ್ಗೆ ಮಾಹಿತಿ ನೀಡುತ್ತಿಲ್ಲ. ಹೀಗಾಗಿ ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಬೇಕು‌ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.‌

ಹಗರಣದ ಬಗ್ಗೆ ಮಧ್ಯ ಪ್ರವೇಶಿಸಿ ಆರ್​ಬಿಐಗೆ ಸೂಚನೆ ನೀಡಬೇಕೆಂದು ಶಾಂತಿಯುತ ಪ್ರತಿಭಟನೆ ನಡೆಸಿದರು.‌

ಓದಿ : ಮೈಸೂರು ಚಾಮುಂಡಿ ತಾಯಿ ದರ್ಶನ ಪಡೆದ ಸಿಎಂ ಯಡಿಯೂರಪ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.