ETV Bharat / state

ಅಕ್ಟೋಬರ್ 15ರವರೆಗೆ ಶಾಲಾ-ಕಾಲೇಜು‌ಗಳ ಬಾಗಿಲು ಬಂದ್ - Karnataka School and colleges Reopen

ಕೋವಿಡ್- 19 ಸೋಂಕು ಹರಡುವಿಕೆ ರಾಜ್ಯದಲ್ಲಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 15ರವರೆಗೆ ಶಾಲಾ-ಕಾಲೇಜುಗಳನ್ನು ಬಂದ್​ ಮಾಡಲು ನಿರ್ಧರಿಸಲಾಗಿದೆ.

ಶಾಲಾ-ಕಾಲೇಜು‌ಗಳು ಬಂದ್
ಶಾಲಾ-ಕಾಲೇಜು‌ಗಳು ಬಂದ್
author img

By

Published : Sep 30, 2020, 5:27 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 15ರವರೆಗೆ ಶಾಲಾ-ಕಾಲೇಜು ಬಾಗಿಲು ಬಂದ್ ಆಗಲಿದೆ.

ಕೋವಿಡ್- 19 ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನ‌ ರಹಿತ ಶಾಲಾ ಕಾಲೇಜುಗಳನ್ನು ಪ್ರಾರಂಭಿಸುವ ಬಗ್ಗೆ ಕೇಂದ್ರ ಸರ್ಕಾರದ ಗೃಹ ಸಚಿವಾಲಯದ ಮಾರ್ಗಸೂಚಿ ನೀಡಿತ್ತು. ಆಗಸ್ಟ್ 29ರ ಮಾರ್ಗಸೂಚಿಯಂತೆ ಕಂಟೈನ್​ಮೆಂಟ್ ಝೋನ್ ಹೊರತುಪಡಿಸಿ 9 ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 21ರಿಂದ ಶಾಲೆಗಳನ್ನು ತೆರೆದು ಸಂದೇಹ ಪರಿಹಾರಕ್ಕಾಗಿ ಶಾಲೆಗಳಿಗೆ ಭೇಟಿ ನೀಡಬಹುದೆಂದು ಅನುಮತಿ ನೀಡಲಾಗಿತ್ತು.

ಆದರೆ ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗದ ಹಿನ್ನೆಲೆ ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜುಗಳಿಗೆ ಭೇಟಿ ನೀಡಲು ಅನುಮತಿ ನೀಡದಿರಲು ಸೆಪ್ಟಂಬರ್ 19ರಂದು ಸೂಚಿಸಲಾಗಿತ್ತು. ರಾಜ್ಯದಲ್ಲಿ ಪ್ರಸ್ತುತ ಹಂತದಲ್ಲಿಯೂ ಪ್ರಮಾಣ ಕಡಿಮೆಯಾಗದ ಕಾರಣ ಈಗಿನ ಪರಿಸ್ಥಿತಿಯಲ್ಲಿ ಶಾಲೆಗಳಿಗೆ ವಿದ್ಯಾರ್ಥಿಗಳು ಬರುವುದು ಕ್ಷೇಮಕರವಲ್ಲ ಎಂದು ಅಭಿಪ್ರಾಯ ವ್ಯಕ್ತವಾಗಿದೆ.

ಈ ಹಿನ್ನೆಲೆಯಲ್ಲಿ ಅಕ್ಟೋಬರ್ 15ರವರೆಗೆ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಭೇಟಿ ನೀಡಲು ಅನುಮತಿ ನೀಡದಿರಲು ತೀರ್ಮಾನಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.