ಬೆಂಗಳೂರು: ರಾಜ್ಯದಲ್ಲಿ ಕಳೆದೆರಡು ದಿನಗಳಿಂದ ಕೊರೊನಾ ರೂಪಾಂತರ ವಿಚಾರವೇ ಸದ್ದು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಜನವರಿಯಿಂದ ಶಾಲೆಗಳು ಆರಂಭವಾಗಲಿದ್ಯಾ?, ಇಲ್ವಾ? ಎಂಬುದಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈಗಾಗಲೇ ನಿರ್ಧಾರ ಮಾಡಿರುವಂತೆ ಜನವರಿ 1 ರಿಂದ ಶಾಲೆ ಆರಂಭವಾಗಲಿದೆ. ಕೊರೊನಾ ರೂಪಾಂತರ ವಿಚಾರ ಮೊನ್ನೆಯಿಂದ ಚರ್ಚೆಯಾಗುತ್ತಿದೆ. ಈ ಬಗ್ಗೆ ತಜ್ಞರ ಜೊತೆಗೆ ಮಾತಾಡಿದ್ದೇನೆ. ವೈರಸ್ನ ಸ್ವರೂಪದ ಬಗ್ಗೆ ಯಾರಿಗೂ ಸ್ಪಷ್ಟವಾಗಿ ಗೊತ್ತಿಲ್ಲ. ಹೊಸ ವೈರಸ್ ಬಗ್ಗೆ ಕೇಂದ್ರ ಸಚಿವ ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ. ಜನರು ಈ ಕುರಿತಾಗಿ ಹೆಚ್ಚು ಆತಂಕ ಪಡುವ ಅವಶ್ಯಕತೆ ಇಲ್ಲ, ಆದರೆ ಮುಂಜಾಗ್ರತೆ ಕೈಗೊಳ್ಳಿ ಎಂದು ತಿಳಿಸಿದ್ದಾರೆ.
ಇನ್ನು ಹೈಕೋರ್ಟ್ ಕೂಡ ಕೊರೊನಾ ಶೂನ್ಯ ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭಿಸುವಂತೆ ಸಲಹೆ ನೀಡಿದೆ. ಹೀಗಾಗಿ ಅದನ್ನೂ ಪರಿಶೀಲಿಸಿ ಇತರೆ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಮಾಡಲಾಗುವುದು. ಸದ್ಯ ಜನವರಿ ಒಂದರಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭವಾಗಲಿದೆ. ಒಂದು ವೇಳೆ ತಾಂತ್ರಿಕ ತಜ್ಞರು ಶಾಲೆ ಆರಂಭದ ಬಗ್ಗೆ ಸಲಹೆ ನೀಡಿದ್ದರೆ ಅದನ್ನು ಚಾಚೂ ತಪ್ಪದೆ ಪಾಲಿಸುವುದಾಗಿ ಹೇಳಿದರು.
ಓದಿ: ಕೊರೊನಾ 2ನೇ ಅಲೆ: ಸಚಿವ ಸುಧಾಕರ್ ನೇತೃತ್ವದಲ್ಲಿ ತಾಂತ್ರಿಕ ಸಲಹಾ ಸಮಿತಿ ಸಭೆ