ಬೆಂಗಳೂರು: ಕೊರೊನಾ ಚಿಕಿತ್ಸೆಗಾಗಿ ಬಳಸುವ ತ್ಯಾಜ್ಯವನ್ನ ವಿಲೇವಾರಿ ಮಾಡುವುದು ಮುಖ್ಯ. ಹೀಗಾಗಿ ಆಯಾ ಜಿಲ್ಲೆಗಳಲ್ಲಿ ಕೋವಿಡ್-19ರ ಜೈವಿಕ-ವೈದ್ಯಕೀಯ ತ್ಯಾಜ್ಯವನ್ನು ಸುರಕ್ಷಿತ ಮತ್ತು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಮ್ಮ ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಪ್ರತ್ಯೇಕ ಕೋವಿಡ್-19 ತ್ಯಾಜ್ಯವನ್ನು ಪ್ರತಿ ದಿನವೂ ಸಂಗ್ರಹಿಸಿ (CPCB ಮಾನದಂಡಗಳ ಪ್ರಕಾರ ಲೇಬಲ್ ಮತ್ತು ಪ್ಯಾಕ್) ಸುರಕ್ಷಿತವಾಗಿ ವಿಲೇವಾರಿ ಮಾಡಲು ಆದೇಶಿಸಲಾಗಿದೆ.