ಬೆಂಗಳೂರು: ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಉಪಾಧ್ಯಕ್ಷ ಕೊಂಡಜ್ಜಿ ಬಿ. ಷಣ್ಮುಖಪ್ಪ, ರಾಜ್ಯ ಆಯುಕ್ತರಾದ ಗೀತಾ ನಟರಾಜ್, ಎನ್. ಶ್ರೀನಿವಾಸನ್, ಎಂ. ಎ. ಚಲ್ಲಯ್ಯ, ಕೆ. ಗಂಗಪ್ಪ ಗೌಡ, ಎಲ್. ಟಿ. ಲೋಕೇಶ್, ಮಹಾನಗರ ಪಾಲಿಕೆ ವ್ಯಾಪ್ತಿಯ ಶಾಲೆಗಳು, ಎಂಇಎಸ್ ಕಾಲೇಜು, ಮಹಾರಾಣಿ ಕಾಲೇಜು, ಆರ್. ಸಿ. ಕಾಲೇಜಿನ 500 ಕ್ಕೂ ಹೆಚ್ಚು ಮಕ್ಕಳು ಹಾಜರಿದ್ದರು.
ಇನ್ನು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ನಾನೂ ವಿದ್ಯಾರ್ಥಿಯಾಗಿದ್ದಾಗ 1972ರಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ಭಾಗವಹಿಸಿದ್ದೆ. ಈಗ ಆ ದಿನಗಳು ನೆನಪಾಗುತ್ತಿದೆ. ನೀವೆಲ್ಲ ಪ್ರಾರ್ಥನೆ ಮಾಡಿದ ಸಾಲುಗಳು ಈಗಲೂ ನೆನಪಿದೆ. ಜೀವನದ ಮೌಲ್ಯ, ತತ್ವ, ಆದರ್ಶ ಅರ್ಥೈಸುವ ಸ್ಕೌಟ್ಸ್ ಮತ್ತು ಗೈಡ್ಸ್ನಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲ ಆಗಿದೆ. ಎಲ್ಲಾ ವಿದ್ಯಾರ್ಥಿಗಳಿಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಶುಭಾಶಯಗಳನ್ನು ತಿಳಿಸಿದ್ದಾರೆ.