ಬೆಂಗಳೂರು : ಕೊರೊನಾ ಮಹಾಮಾರಿಯನ್ನು ರೋಗ ತಡೆಗಟ್ಟಲು ಸರ್ಕಾರ ಆಶಾ ಕಾರ್ಯಕರ್ತೆಯರು, ವೈದ್ಯರ ಮೂಲಕ ಆರೋಗ್ಯ ತಪಾಸಣೆ ನಡೆಸುತ್ತಿದೆ. ಅದರಂತೆ ಇಂದು ಬಿದರಹಳ್ಳಿ ಪಂಚಾಯಿತಿ ವ್ಯಾಪ್ತಿಯ ಹೀರಂಡಹಳ್ಳಿ ಗ್ರಾಮದಲ್ಲಿ ಪ್ರಾಥಮಿಕ ವೈದ್ಯಾಧಿಕಾರಿ ಡಾ.ಸುಧಾ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಸ್ಕ್ರೀನಿಂಗ್ ಮಾಡಿ ಕೊರೊನಾ ವೈರಸ್ ಲಕ್ಷಣಗಳ ಕುರಿತು ಪರೀಕ್ಷಿಸಿದರು.
ಪ್ರತಿಯೊಬ್ಬರೂ ವೈದ್ಯಕೀಯ ತಪಾಸಣೆ ಮಾಡಿಸಿ ತಮ್ಮಆರೋಗ್ಯ ಕಾಪಾಡಿಕೊಳ್ಳಿ ಹಾಗೂ ವೈದ್ಯರು ಸೂಚಿಸುವ ಸಲಹೆಗಳನ್ನ ಪಾಲಿಸಿ ಎಂದರು.
ನಂತರ ಮಾತನಾಡಿದ ಪ್ರಾಥಮಿಕ ವೈದ್ಯಾಧಿಕಾರಿ ಡಾ.ಸುಧಾ ನಾವು ಮಹದೇವಪುರ ಕ್ಷೇತ್ರದ ಬಿದರಹಳ್ಳಿ ಪಂಚಾಯಿತಿಯ ಎಲ್ಲ ಗ್ರಾಮದ ಮನೆ ಮನೆಗೆ ಭೇಟಿ ನೀಡಿ ಕೊರೊನಾ ಸೋಂಕು ತಪಾಸಣೆ ಮಾಡಿ ಆರೋಗ್ಯದ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯ ಮಾಡುತಿದ್ದೇವೆ ಎಂದರು.
ಆಶಾ ಕಾರ್ಯಕರ್ತೆಯರನ್ನು ಐದು ವಿಭಾಗದಲ್ಲಿ ವಿಂಗಡಿಸಿ ಪ್ರತಿ ದಿನ ಒಂದೊಂದು ಏರಿಯಾಗಳಿಗೆ ಭೇಟಿ ನೀಡಿ ಪ್ರತಿಯೊಬ್ಬರ ತಪಾಸಣೆ ಮಾಡಲಾಗುತ್ತಿದೆ ಎಂದರು.